Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆ ಸಾಧ್ಯತೆ

|

Updated on: Oct 08, 2023 | 7:54 AM

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆ ಸಾಧ್ಯತೆ
ಮಳೆ
Follow us on

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

ಜಯಪುರ, ಹುಂಚದಕಟ್ಟೆ, ಗೇರುಸೊಪ್ಪ, ಸಿದ್ದಾಪುರ, ಚನ್ನರಾಯಪಟ್ಟಣದಲ್ಲಿ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ