AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಎಂದ ಅಧಿಕಾರಿ

ದಾಳಿ ವೇಳೆ, ತಮ್ಮ ಬಳಿ ಇರುವುದು ನಕಲಿ ಉಗುರು ಎಂದು ನಮ್ಮ ಅಧಿಕಾರಿಗಳಿಗೆ ದರ್ಶನ್ ಹೇಳಿದ್ದಾರೆ. ಎಲ್ಲವನ್ನೂ ನಾವು ತನಿಖೆ ಮಾಡ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲ ತಪ್ಪಿತಸ್ಥರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ ಹೇಳಿದ್ದಾರೆ.

ಹುಲಿ ಉಗುರು ವಿವಾದ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಎಂದ ಅಧಿಕಾರಿ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 26, 2023 | 3:00 PM

Share

ಬೆಂಗಳೂರು, ಅಕ್ಟೋಬರ್ 25: ಹುಲಿ ಉಗುರು ವಿವಾದಕ್ಕೆ (Tiger Claw Locket Row) ಸಂಬಂಧಿಸಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ (Kumar Pushkar) ಹೇಳಿದ್ದಾರೆ. ಬೆಂಗಳೂರಿನ ವಿವಿಧೆಡೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಮಾಹಿತಿ ನೀಡಿದ ಅವರು, ಬುಧವಾರ ಬೆಂಗಳೂರಿನಲ್ಲಿ 5 ಕಡೆ ಶೋಧ ನಡೆಸಿದ್ದೇವೆ. ಯಾರ ಮೇಲೆ ದೂರು ಬಂದಿತ್ತೋ ಅವರ ಮನೆ ಮೇಲೆ ದಾಳಿ ಮಾಡಿದ್ದೇವೆ. ದಾಳಿ ಮಾಡಿ ಪೆಂಡೆಂಟ್ ವಶಕ್ಕೆ ಪಡೆದು ಕೊಳ್ಳಲಾಗಿದೆ ಎಂದು ಹೇಳಿದರು.

ವಶಕ್ಕೆ ಪಡೆದ ಪೆಂಡೆಂಟ್​​ಗಳನ್ನು ಎಫ್ಎಸ್‌ಎಲ್‌ಗೆ ಕಳುಹಿಸುತ್ತೇವೆ. ಅಲ್ಲಿಂದ ವರದಿ ಬಂದಮೇಲೆ ನಮಗೆ ಯಾವುದು ಹುಲಿ ಉಗುರು ಎನ್ನುವುದ ಖಾತರಿ ಆಗುತ್ತದೆ. ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್, ಗಿರಿ ಮನೆಗೆ ಹೋಗಿ ವಿಚಾರಣೆ ಮಾಡಿದ್ದೇವೆ. ನಿಖಿಲ್, ದರ್ಶನ್ ಅವರಿಂದ ವಶಕ್ಕೆ ಪಡೆದ ಉಗುರು ಮೇಲ್ನೋಟಕ್ಕೆ ಅಸಲಿ ಅಲ್ಲ ಎಂದು ಅನಿಸುತ್ತಿದೆ. ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದು, ಅದನ್ನು ಕೂಡ ಪರಿಶೀಲಿಸಲಾಗ್ತಿದೆ ಎಂದು ಅವರು ಹೇಳಿದರು.

ಉಗುರನ್ನು ಬದಲಾಯಿಸಿರುವ ಪ್ರಕರಣ ಕಂಡುಬಂದರೆ ಸಾಕ್ಷ್ಯ ನಾಶದಡಿ ಪ್ರಕರಣ ದಾಖಲಿಸುತ್ತೇವೆ. ಸಂತೋಷ್ ಕೇಸ್ ಅಲ್ಲಿ ಹೊಸ ಹುಲಿ ಉಗುರಾಗಿತ್ತು. ಹಾಗಾಗಿ ಬೇಗ ಪತ್ತೆಯಾಯ್ತು. ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದಾಗಿದೆ. ಹಾಗಾಗಿ ನಾವು ನೈಜತೆಯ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಜಗ್ಗೇಶ್ ಅವರ ಹಳೆಯ ವಿಡಿಯೋ ಸ್ಟೇಟ್​​ಮೆಂಟ್ ಆಧಾರವಾಗಿಟ್ಟುಕೊಂಡು ನಾವು ಕ್ರಮ‌ಕೈಗೊಳ್ಳಲು ಆಗುವುದಿಲ್ಲ ಎಂದು ಕುಮಾರ ಪುಷ್ಕರ್ ಹೇಳಿದರು.

ದಾಳಿ ವೇಳೆ, ತಮ್ಮ ಬಳಿ ಇರುವುದು ನಕಲಿ ಉಗುರು ಎಂದು ನಮ್ಮ ಅಧಿಕಾರಿಗಳಿಗೆ ದರ್ಶನ್ ಹೇಳಿದ್ದಾರೆ. ಎಲ್ಲವನ್ನೂ ನಾವು ತನಿಖೆ ಮಾಡ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲ ತಪ್ಪಿತಸ್ಥರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಹುಲಿ ಉಗುರು ವಿವಾದ: ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ; ಸಚಿವ ಈಶ್ವರ ಖಂಡ್ರೆ

ಈ ಮಧ್ಯೆ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದೆ. ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ. ವ್ಯನ್ಯಜೀವಿಗಳ ಚರ್ಮ, ಉಗುರು, ಇತರೆ ವಸ್ತು ಹೊಂದಿದ್ದವರು ಸ್ವಯಂಪ್ರೇರಿತವಾಗಿ ಹಿಂದಿರುಗಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ