AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ಬಿಗಿ ಭದ್ರತೆ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

Tight security for Karnataka Bandh; ಯಾವುದೇ ರೀತಿಯ ಬಲವಂತದ ಬಂದ್​ ಆಗಿರಬಾರದು. ಕರ್ನಾಟಕ ಬಂದ್​ ಸ್ವಯಂ ಪ್ರೇರಿತ ಆಗಿರಬೇಕು. ಶಾಂತಿಯುವವಾಗಿ ಬಂದ್​ ಮಾಡಬೇಕು. ಬಂದ್​ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಇತೀಂದ್ರ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಬಂದ್​ಗೆ ಬಿಗಿ ಭದ್ರತೆ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Follow us
Kiran HV
| Updated By: ರಮೇಶ್ ಬಿ. ಜವಳಗೇರಾ

Updated on:Sep 29, 2023 | 10:16 AM

ಬೆಂಗಳೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಶುಕ್ರವಾರ ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಕಲ್ಪಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಅಲ್ಲದೆ, ಬಂದ್ ಸ್ವಯಂಪ್ರೇರಿತವಾಗಿರಬೇಕು. ಯಾವುದೇ ಕಾರಣಕ್ಕೂ ಬಲವಂತದ ಬಂದ್ ಮಾಡಿಸಬಾರದು. ಹಾಗೆ ಮಾಡಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಬಂದ್​ಗೆ ಕೈಗೊಳ್ಳಲಾಗಿರುವ ಪೊಲೀಸ್ ಭದ್ರತೆ ಬಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಇತೀಂದ್ರ ‘ಟಿವಿ 9’ಗೆ ಮಾಹಿತಿ ನೀಡಿದ್ದು, 80 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಕಾನೂನು ಉಲ್ಲಂಘಿಸಿದರೆ ಅಂತವರ ವಿರುದ್ದ ಕಠಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಎಸ್ಪಿಗಳು, ಐಜಿಗಳು ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಪೊಲೀಸ್​ ವತಿಯಿಂದ 250 ಕ್ಕೂ ಹೆಚ್ಚು ಕೆಆರ್​ಪಿಎಸ್​ ತುಕಡಿಗಳು, 5 ಆರ್​​​ಎಎಫ್​ ತುಕಡಿಗಳು, ಎಲ್ಲಾ ಸಿಆರ್​ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯಾವುದೇ ರೀತಿಯ ಬಲವಂತದ ಬಂದ್​ ಆಗಿರಬಾರದು. ಕರ್ನಾಟಕ ಬಂದ್​ ಸ್ವಯಂ ಪ್ರೇರಿತ ಆಗಿರಬೇಕು. ಶಾಂತಿಯುವವಾಗಿ ಬಂದ್​ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಎಡಿಜಿಪಿ ಮನವಿ ಮಾಡಿದ್ದಾರೆ.

ಬಂದ್​ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಕಾವೇರಿ ನೀರು ಬಿಡುಗಡೆ ಖಂಡಿಸಿ ಕರೆ ನೀಡಲಾಗಿರುವ ಶುಕ್ರವಾರದ ಕರ್ನಾಟಕ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಂದ್ ಕಾರಣ ಕೆಎಸ್​ಆರ್​​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆಯೇ ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. ಈ ಮಧ್ಯೆ, ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸಾರಿಗೆ ಸಂಸ್ಥೆ ಮನವಿ ಮಾಡಿದೆ ಎಂದು ವರದಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Thu, 28 September 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ