ಮಂಗಳೂರು: ಇಲ್ಲಿನ ಸೆಂಟ್ರಲ್ ನಿಲ್ದಾಣದಿಂದ ಬೆಂಗಳೂರಿಗೆ ವಾರದಲ್ಲಿ ಮೂರು ಬಾರಿ ಪ್ರಯಾಣಿಸುವ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಮಂಗಳೂರಿನಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುವ ರೈಲು ಗುರುವಾರ, ಶನಿವಾರ ಮತ್ತು ಸೋಮವಾರ ರಾತ್ರಿ 8.10ಕ್ಕೆ ಮಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 8.40ಕ್ಕೆ ಬೆಂಗಳೂರು ನಿಲ್ದಾಣ ತಲುಪುತ್ತದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ರೈಲು ಬೆಂಗಳೂರಿನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ರಾತ್ರಿ 8.30ಕ್ಕೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದ್ದು, ಬೆಳಿಗ್ಗೆ 8.35ರ ವೇಳೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕನ್ನಡಿಗರ ಪಾಲಿಗೆ ಸಂತಸದ ಸುದ್ದಿ..ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ‘ಸರ್ಎಂವಿ’ ಹೆಸರು