ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು. ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ […]

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
Follow us
ಸಾಧು ಶ್ರೀನಾಥ್​
|

Updated on:Oct 31, 2019 | 3:11 PM

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು.

ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ ಎಂದು ಮಾಧ್ಯಮ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ: ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ವಿಧಾನಸಭಾ ಕಲಾಪದಿಂದ ಮಾಧ್ಯಮ ಬಹಿಷ್ಕಾರ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಮಾಧ್ಯಮಗಳ ಬಹಿಷ್ಕಾರ ಸ್ಪೀಕರ್ ತೆಗೆದುಕೊಂಡಿರೋ ನಿರ್ಧಾರ. ನಾನು ಸ್ಪೀಕರ್ ಜೊತೆ ಮಾತುಕತೆ ನಡೆಸಿ ಈ ಹಿಂದೆ ಇದ್ದ ವ್ಯವಸ್ಥೆ ಜಾರಿಗೆ ತರುವಂತೆ ಮಾತನಾಡುತ್ತೇನ. ಮುಂದಿನ ಅಧಿವೇಶನದಿಂದ ಮೊದಲಿನಂತೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ. ಇದು ಕೇವಲ ಭರವಸೆ ಅಲ್ಲ, ಯಡಿಯೂರಪ್ಪ ಏನಾದ್ರೂ ಹೇಳಿದ್ರೆ ಅದು ತಪ್ಪಲ್ಲ ಎಂದರು.

ಡಿಸಿಎಂ ಹುದ್ದೆ ಸೃಷ್ಟಿಯಲ್ಲಿ ತಪ್ಪಾಗಿಲ್ಲ: ಸರ್ಕಾರದಲ್ಲಿ ಮೂವರು ಡಿಸಿಎಂ ಸೃಷ್ಟಿಯಾಗಿರುವುದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರವಾಗಿದೆ. ಹೊಸದಾಗಿ ನಾನು ಯಾರಿಗೂ ಯಾವ ಸ್ಥಾನಮಾನ ನೀಡ್ತಿಲ್ಲ. ಆದ್ರೆ ಡಿಸಿಎಂ ಸೃಷ್ಟಿಯಲ್ಲಿ ಯಾವುದೇ ತಪ್ಪಾಗಿಲ್ಲ, ಉತ್ತಮವಾಗಿ ಕಾರ್ಯ ಮಾಡ್ತಿದ್ದಾರೆ. ಇದೇ ವೇಳೆ ನಾನು ಮುಂದಿನ ಮೂರೂವರೆ ವರ್ಷ ಸರ್ಕಾರ ನಡೆಸಿಕೊಂಡು ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 1:51 pm, Wed, 30 October 19

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ