ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಶಾಸಕ ಶ್ರೀನಿವಾಸ್ಗೆ ವಂಚನೆ, ಮಾರುತಿ ಬಂಧನ
ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆಂದು ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಮ್ಯಾನೇಜರ್‌ಗೆ 6.5 ಲಕ್ಷ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಬ್ಬ ಎಂಎಲ್ಎಗೂ ಟಿಟಿಡಿ(TTD) ಹೆಸರಲ್ಲಿ ವಂಚನೆ ಮಾಡಿದ ಘಟನೆ ನಡೆದಿತ್ತು. ಇದೀಗ ನೆಲಮಂಗಲದಲ್ಲೂ ಅಂಥದ್ದೇ ಘಟನೆಯೊಂದು ನಡೆದಿದ್ದು, ಶಾಸಕ ಶ್ರೀನಿವಾಸ್ಗೆ ವಂಚನೆ ಮಾಡಿದ್ದ ಆರೋಪಿ ಮಾರತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಆಪ್ತ ಸಹಾಯಕ ಆಗಿದ್ದ ಮಾರುತಿ ಎಂಬಾತನಿಂದ 8 ಲಕ್ಷ ರೂಪಾಯಿ ವಂಚಿಸಲಾಗಿತ್ತು.
ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವು, ಉದ್ಯಮಿಗಳು, ರಾಜಕಾರಣಿಗಳಿಗೆ ಮೋಸ ಮಾಡಿದ್ದ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ನ ಮಾಜಿ ಆಪ್ತ ಸಹಾಯಕ ಮಾರುತಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ದರ್ಶನ ಮಾಡಿಸುತ್ತೇನೆ ಎಂದು 8 ಲಕ್ಷ ರೂ. ಹಣ ಪಡೆದು ಎಲ್ಲರಿಗೂ ನಾಮ ಹಾಕಿದ್ದ, ಜನವರಿ 14ರಂದು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕರ್ನಾಟಕದಿಂದ ಟಿಟಿಡಿಯ ಸದಸ್ಯರಾಗಿದ್ದ ಎಸ್ಆರ್ ವಿಶ್ವನಾಥ್, ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನಕ್ಕಾಗಿ ಪಾಸ್ ಕೊಡಿಸುವ ಕೆಲಸವನ್ನು ಮಾರುತಿ ಮಾಡುತ್ತಿದ್ದ.
ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ಆಪ್ತ ಮುಖಂಡರಿಗೆ ವಿಶೇಷ ದರ್ಶನ ಮಾಡಿಸುತ್ತೇವೆ, ರೂಂ ವ್ಯವಸ್ಥೆಯೂ ಇರಲಿದೆ ಎಂದು ಹೇಳಿ ಪಾಸ್ ಇಲ್ಲದೆ, ದರ್ಶನವನ್ನೂ ಮಾಡಿಸದೆ ಪರಾರಿಯಾಗಿದ್ದ. ಸತತ 11 ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ಓದಿ: ಎಐ ಚಾಟ್ಬಾಟ್ನಿಂದ ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬಹುದು ಹೇಗೆ?
ಇತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಲೇ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಆತನನ್ನು ಕೆಲಸದಿಂದ ತಗೆದಿದ್ದರು. ಇತನ ಮೇಲೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವಾರು ಠಾಣೆಗಳಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ IPC 1860 ರೀತ್ಯಾ 406, 417, 419, 420 ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಹಿನ್ನಲೆ ಆರೋಪಿ ಮಾರುತಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:38 pm, Thu, 26 December 24