ತಿರುಪತಿ ಲಡ್ಡು ವಿವಾದ: ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ, ಮುಜರಾಯಿ ಇಲಾಖೆ ಆದೇಶ

ತಿರುಪತಿ‌ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎಂಬ ಆರೋಪ ಸಾಕಷ್ಟು ಸಂಚಲನ ಮೂಡಿಸಿತ್ತು. ಸದ್ಯ ಕರ್ನಾಟಕದಲ್ಲಿ ಮುಜುರಾಯಿ ಇಲಾಖೆ ಕಠಿಣ ನಿಮಯ ಜಾರಿಗೆ ಮುಂದಾಗಿದ್ದು, ಪ್ರಸಾದ ವಿತರಿಸುವ ಹಾಗೂ ತಯಾರಿಸುವ ಜಾಗದಲ್ಲಿ ಸಿಸಿಟಿವಿ ಕ್ಯಾಮರಾವನ್ನು ಅಳವಡಿಕೆ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ತಿರುಪತಿ ಲಡ್ಡು ವಿವಾದ: ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ, ಮುಜರಾಯಿ ಇಲಾಖೆ ಆದೇಶ
ತಿರುಪತಿ ಲಡ್ಡು ವಿವಾದ: ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ, ಮುಜರಾಯಿ ಇಲಾಖೆ ಆದೇಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 29, 2024 | 10:54 PM

ಬೆಂಗಳೂರು, ಸೆಪ್ಟೆಂಬರ್​ 29: ತಿರುಪತಿ ಲಡ್ಡು ವಿವಾದ (Tirupati laddu row) ಕರ್ನಾಟಕ ಸೇರಿದಂತೆ ಎಲ್ಲೆಡೆ ಸಾಕಷ್ಟು ಪರಿಣಾಮ ಬೀರಿದೆ. ಇತ್ತೀಚೆಗೆ ವಿವಿಧ ಬ್ರಾಂಡ್‌ಗಳ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಜೊತೆಗೆ ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚಿಸಲಾಗಿತ್ತು. ಇದೀಗ ಮುಜರಾಯಿ ಇಲಾಖೆ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಎಲ್ಲಾ ದೇವಸ್ಥಾನದ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ದೇವಸ್ಥಾನದ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ

ತಿರುಪತಿ‌ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎಂಬ ಆರೋಪ ಸಾಕಷ್ಟು ಸಂಚಲನ ಮೂಡಿಸಿತ್ತು. ಅನ್ಯ ರಾಜ್ಯಗಳಲ್ಲೂ ದೇವಸ್ಥಾನ ಮುಜರಾಯಿ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಒಂದಷ್ಟು ನಿಯಮಗಳನ್ನು ಜರುಗಿಸಲಾಗಿತ್ತು.‌ ಇದೀಗ ನಮ್ಮ ರಾಜ್ಯದಲ್ಲಿ ಮುಜುರಾಯಿ ಇಲಾಖೆ ಫುಲ್ ಸ್ಟ್ರೀಕ್ಟ್ ಮಾಡಲು ಮುಂದಾಗಿದ್ದು, ಪ್ರಸಾದ ವಿತರಿಸುವ ಹಾಗೂ ತಯಾರಿಸುವ ಜಾಗದಲ್ಲಿ ಸಿಸಿಟಿವಿ ಕ್ಯಾಮರಾವನ್ನ ಅಳವಡಿಕೆ ಕಡ್ಡಾಯ ಮಾಡಿದೆ.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ಹೌದು, ಲಡ್ಡು ವಿವಾದದ ಬಳಿಕ ಭಕ್ತಾದಿಗಳಲ್ಲಿ ಪ್ರಸಾದದ ಕುರಿತಾಗಿ ಅನುಮಾನಗಳು ಬರುವುದಕ್ಕೆ ಶುರುವಾಗಿತ್ತು. ಹೀಗಾಗಿ ಇವುಗಳಿಗೆ ತೆರೆ ಎಳೆಯುವ ಸಲುವಾಗಿ ಮುಜರಾಯಿ ಇಲಾಖೆ ದೇವಸ್ಥಾನಗಳ ದಾಸ್ತಾನು ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನ ಕಡ್ಡಾಯ ಮಾಡಲಾಗಿದೆ. ಇಷ್ಟು ದಿನಗಳ ಕಾಲ ಎ ವರ್ಗದ ದೇವಸ್ಥಾನಗಳಲ್ಲಿ ಮಾತ್ರ ಸಿಸಿಟಿವಿ ಕ್ಯಾಮರಾ ಅಳಡಿಸಲಾಗಿತ್ತು. ಆದರೆ ಇನ್ನು ಮುಂದೆ ಬಿ‌ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿಯೂ ಅಡುಗೆ ತಯಾರಿಕಾ ಜಾಗದಲ್ಲಿ ಸಿಸಿಟಿವಿ ಕಡ್ಡಾಯ ಮಾಡಿದ್ದು, ನಿಯಮ ಉಲ್ಲಂಘಿಸದಂತೆ ಇಲಾಖೆಯಿಂದ ತಾಖೀತು ಮಾಡಲಾಗಿದೆ.

ಸದ್ಯ ನಗರದ ಬನಶಂಕರಿ ದೇವಸ್ಥಾನದಲ್ಲಿ ಅಳವಡಿಕ ಮಾಡಿದ್ದು, ಉಳಿದ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಸಲು ಮುಂದಾಗುತ್ತಿವೆ ಎಂದು ಮುಜುರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಇನ್ನು, ತಿರುಪತಿ ಲಡ್ಡು ವಿವಾದ ನಂತರದಲ್ಲಿ ಭಕ್ತದಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇಷ್ಟು ದಿನ ದೇವಸ್ಥಾನದಲ್ಲಿ ಪ್ರಸಾದ ಕೊಟ್ಟರೆ ಕಣ್ಣಿಗೆ ಒತ್ತಿಕೊಂಡು ತಿನ್ನುತ್ತಿದ್ದರು. ಆದರೆ ಈಗ ತಿನ್ನಬೇಕಾ ಬೇಡವಾ ಎನ್ನುವ ಬಗ್ಗೆ ಅನುಮಾನ ಶುರುವಾಗಿದೆ. ಹಾಗಾಗಿ ಸಿಸಿಟಿವಿ ಅಳವಡಿಸುತ್ತಿರುವುದು ಒಳ್ಳೆಯ ವಿಚಾರ. ಎಲ್ಲವು ಪಾರದರ್ಶಕವಾಗಿ ಇರಬೇಕು ಎಂದು ಭಕ್ತಾದಿ ಸ್ವಾತಿ ಎಂಬುವವರು ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಮುಜರಾಯಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದ್ದು, ನಗರದ ಎಲ್ಲಾ ದೇವಸ್ಥಾನಗಳಲ್ಲಿ ಕ್ಯಾಮರಾ ಅಳವಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ