ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ: ಕರ್ನಾಟಕದ ನಾಯಕರಿಗೆ ಮತ್ತೆ ಬಿಜೆಪಿ ಹೈಕಮಾಂಡ್ ಬುಲಾವ್

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಸಂಬಂಧ ಬಿಜೆಪಿಯ ತಯಾರಿ ಭರ್ಜರಿಯಾಗಿ ಸಾಗುತ್ತಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಪಕ್ಷ ಈಗ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದ್ದು, ಕರ್ನಾಟಕದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಕೂಡ ಈ ಪಟ್ಟಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.ಈ ಸಂಬಂಧ ಸಮಾಲೋಚನೆ ನಡೆಸಲು ರಾಜ್ಯ ನಾಯಕರಿಗೆ ವರಿಷ್ಠರಿಂದ ಬುಲಾವ್ ಬಂದಿದೆ.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ: ಕರ್ನಾಟಕದ ನಾಯಕರಿಗೆ ಮತ್ತೆ ಬಿಜೆಪಿ ಹೈಕಮಾಂಡ್ ಬುಲಾವ್
ಆರ್ ಅಶೋಕ & ವಿಜಯೇಂದ್ರ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Mar 09, 2024 | 2:10 PM

ಬೆಂಗಳೂರು, ಮಾರ್ಚ್​ 9: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡುವ ವಿಚಾರವಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಬಿಜೆಪಿ (BJP) ಹೈಕಮಾಂಡ್ ರಾಜ್ಯ ನಾಯಕರಿಗೆ ಮತ್ತೆ ಬುಲಾವ್ ಕಳಿಸಿದೆ. ಇದರಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ನಾಳೆ ಸಂಜೆ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ (BJP CEC Meeting) ನಡೆಯಲಿದ್ದು ಅದಕ್ಕೂ ಮುನ್ನ ರಾಜ್ಯ ನಾಯಕರ ಜೊತೆ ಮೂರನೇ ಸುತ್ತಿನ ಚರ್ಚೆ ನಡೆಸುವುದು ಹೈಕಮಾಂಡ್ ಉದ್ದೇಶವಾಗಿದೆ.

ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಬಿವೈ ವಿಜಯೇಂದ್ರ ಮತ್ತಿತರ ರಾಜ್ಯ ನಾಯಕರು ದೆಹಲಿಗೆ ತೆರಳಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರ ಜೊತೆ ಮಾತುಕತೆ ನಡೆಸಿ ವಾಪಸಾಗಿದ್ದರು.

ನಂತರದ ಬೆಳವಣಿಗೆಯಲ್ಲಿ, ರಾಜ್ಯದ ಕೆಲವು ಕ್ಷೇತ್ರಗಳ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿದ್ದವು. ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರ ಪರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಕ್ಷದ ಅನೇಕ ಕಾರ್ಯಕರ್ತರು ಅಭ್ಯರ್ಥಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವರಿಷ್ಠರಿಗೆ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ: ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ: ಬೆಳಗಾವಿಯಲ್ಲಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಭೀತಿ

ಈ ಮಧ್ಯೆ, ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈತಪ್ಪಲಿದೆ ಎಂಬ ಊಹಾಪೋಹಗಳು ಹರಡಿವೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ನಾಲ್ಕು ಗೋಡೆಗಳ ಮಧ್ಯೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದಿರುತ್ತದೆ.ಆ ಎಲ್ಲ ಮಾಹಿತಿಗಳನ್ನು ಮಾಧ್ಯಮದವರ ಮುಂದೆ ಬಹಿರಂಗಪಡಿಸಲಾಗದು ಎಂದು ಹೇಳಿದ್ದಾರೆ. ಇದು ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಬಗ್ಗೆ ಹಬ್ಬಿರುವ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ