ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಗರಂ; ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರಿನ ಫ್ರೀಡಂಪಾರ್ಕ್‌ನ ಕಾಳಿದಾಸ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪುಟ್ಟಪುಟ್ಟ ಮಕ್ಕಳೊಂದಿಗೆ ಮಹಿಳೆಯರು, ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೂಕ್ತ ಭರವಸೆ ಸಿಗದ ಹಿನ್ನೆಲೆ ಪ್ರತಿಭಟನೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದಿದ್ದಾರೆ.

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಗರಂ; ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ
ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 03, 2021 | 5:26 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಯಾವುದೇ ಸೂಕ್ತ ಭರವಸೆ ಸಿಗದ ಹಿನ್ನೆಲೆಯಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಇಂದಿನಿಂದ ಅಹೋರಾತ್ರಿ ಪ್ರತಿಭಟನೆ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷೆ ವರಲಕ್ಷ್ಮೀ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನ ಕಾಳಿದಾಸ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪುಟ್ಟಪುಟ್ಟ ಮಕ್ಕಳೊಂದಿಗೆ ಮಹಿಳೆಯರು, ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೂಕ್ತ ಭರವಸೆ ಸಿಗದ ಹಿನ್ನೆಲೆ ಪ್ರತಿಭಟನೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದಿದ್ದಾರೆ.

ನಿನ್ನೆಯಷ್ಟೇ ಎಐಟಿಯುಸಿ (ಅಖಿಲ ಭಾರತ ಕಾರ್ಮಿಕ ಒಕ್ಕೂಟ) ಸಂಘಟನೆಯಿಂದ ಸಾವಿರಾರು ಕಾರ್ಯಕರ್ತೆಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿ ವಾಪಸ್ಸಾಗಿದ್ದಾರೆ. ಯಾವುದೇ ಪ್ರತಿಕ್ರಿಯೆ ದೊರೆಯದ ಕಾರಣ ನಾಳೆ ಸಿಐಟಿಯು(ಸೆಂಟರ್​ ಆಫ್​ ಇಂಡಿಯನ್ ಟ್ರೇಡ್​ ಯೂನಿಯನ್) ಸಂಘಟನೆಯಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅಂಗನವಾಡಿ ಕಾರ್ಯಕರ್ತೆಯರು ಸಿದ್ಧರಾಗಿದ್ದಾರೆ. 25 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋಗೆ ಮುಂದಾಗಿದ್ದು, ಬೆಳಿಗ್ಗೆ 11 ಗಂಟೆಗೆ ರೈಲ್ವೇ‌ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಲಿದೆ.

ಪಿಂಚಣಿ ಯೋಜನೆಯನ್ನ ಜಾರಿಗೆ ತರಬೇಕು. ಸೇವಾ ನಿರತ ಆಧಾರದಲ್ಲಿ ಗೌರವಧನ ನೀಡಬೇಕು. ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಇಎಸ್​ಐ ಸೌಲಭ್ಯಗಳನ್ನ ಒದಗಿಸಿಕೊಟ್ಟಿಲ್ಲ. ಎಲ್​ಕೆಜಿ ಹಾಗೂ ಯುಕೆಜಿ ತರಗತಿಗಳನ್ನ ಅಂಗನವಾಡಿಗಳಲ್ಲೇ ಆರಂಭಿಸಬೇಕು. ಮಿನಿ ಅಂಗನವಾಡಿಗಳನ್ನ ಉನ್ನತೀಕರಿಸುವ ಜೊತೆಗೆ ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನ ನೇಮಕಾತಿ ಮಾಡಬೇಕು. ಬಿಎಲ್​ಓ ಜವಬ್ದಾರಿಯಿಂದ ಕಾರ್ಯರ್ತೆಯರಿಗೆ ಬಿಡುಗಡೆ ಸಿಗಬೇಕು. ಜೊತೆಗೆ, ಕೊವಿಡ್​19 ಪರಿಹಾರವನ್ನ ನೀಡಬೇಕು ಎಂಬ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ