ರಾಜ್ಯದಲ್ಲಿಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು; ಓರ್ವ ಸಾವು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಡಿ.22) ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನು ಬೆಂಗಳೂರು(Bengaluru)ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.
ಬೆಂಗಳೂರು, ಡಿ.22: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು (Corona virus) ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನು ಬೆಂಗಳೂರು(Bengaluru)ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿದೆ. ಸಚಿವರಾದ ಹಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?
ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಸಿದ್ಧತೆ
ಇನ್ನು ಕೊರೊನಾ ಹಾಟ್ಸ್ಪಾಟ್ ಆಗುತ್ತಿರುವ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯ ಒಪಿಡಿ ಬ್ಲಾಕ್ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ನಿತ್ಯ ಆಸ್ಪತ್ರೆ ಕ್ಯಾಂಪಸ್ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಅದರಂತೆ ನಿನ್ನೆ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್ ಕಂಡುಬಂದಿತ್ತು. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್ ನಿರ್ಮಾಣ ಮಾಡಲಾಗಿದೆ. ಐಸಿಯುನಲ್ಲಿ 6 ಬೆಡ್ಗಳನ್ನು ಇರಿಸಲಾಗಿದೆ. ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್ಗಳನ್ನು ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯಲ್ಲಿ ಪಿಪಿಇ ಕಿಟ್, ಮಾಸ್ಕ್, ಆಕ್ಸಿಜನ್ ಸಿಲಿಂಡರ್, ಲಿಕ್ವಿಡ್ ಆಕ್ಸಿಜನ್ ಹಾಗೂ ಆಕ್ಸಿಜನ್ ಜನರೇಟರ್ಗಳನ್ನ ಪರಿಶೀಲಿಸಿ ಸಿದ್ಧಗೊಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:59 pm, Fri, 22 December 23