ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ; ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಂದ್

|

Updated on: Oct 29, 2019 | 11:21 AM

ಹಾಸನ: ಕಳೆದ 11 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆಯ ದರ್ಶನೋತ್ಸವ ಇಂದು ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಿದೆ. ಒಟ್ಟು 13 ದಿನ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಅದರಲ್ಲಿ 11 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಇಂದು ವಿಸರ್ಜನಾ ಪೂಜೆ ಬಳಿಕ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲನ್ನು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿಯವರು ಮುಚ್ಚಲಿದ್ದಾರೆ. ಕಳೆದ 11 […]

ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ; ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಂದ್
ಹಾಸನಾಂಬೆ
Follow us on

ಹಾಸನ: ಕಳೆದ 11 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆಯ ದರ್ಶನೋತ್ಸವ ಇಂದು ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಿದೆ. ಒಟ್ಟು 13 ದಿನ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಅದರಲ್ಲಿ 11 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಇಂದು ವಿಸರ್ಜನಾ ಪೂಜೆ ಬಳಿಕ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲನ್ನು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿಯವರು ಮುಚ್ಚಲಿದ್ದಾರೆ.

ಕಳೆದ 11 ದಿನಗಳಿಂದ ಲಕ್ಷಾಂತರ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕೊನೆಯ ಮೂರು ದಿನ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದರು.

Published On - 9:55 am, Tue, 29 October 19