ಶ್ರಾವಣ ಮಾಸದ ಮಂಗಳವಾರದಂದು ಗೃಹಲಕ್ಷ್ಮಿಯರ ಖಾತೆಗೆ ಹಣ

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಹಣ ಕಳೆದ ಎರಡು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮಾವಣೆಯಾಗಿರಲಿಲ್ಲ. ಇದರಿಂದ ಮನೆ ಯಜಮಾನಿಯರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದರು. ಆದರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ಈ ಒಂದು ಹೇಳಿಕೆ ಫಲಾನುಭವಿಗಳ ಮುಖದಲ್ಲಿ ಸಂತಸ ಮೂಡಿಸಿದೆ.

ಶ್ರಾವಣ ಮಾಸದ ಮಂಗಳವಾರದಂದು ಗೃಹಲಕ್ಷ್ಮಿಯರ ಖಾತೆಗೆ ಹಣ
ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್​
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Aug 06, 2024 | 2:27 PM

ಮಂಡ್ಯ, ಆಗಸ್ಟ್​​ 06: ಶ್ರಾವಣ ಮಾಸದ ಮೊದಲ ಮಂಗಳವಾರದಂದು ಕರ್ನಾಟಕ ಸರ್ಕಾರ (Karnataka Government) ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದೆ. ಮನೆಯ ಯಜಮಾನಿ ಖಾತೆಗೆ ಲಕ್ಷ್ಮಿ (ಹಣ) ಬರಲಿದ್ದಾಳೆ.  ಗೃಹಲಕ್ಷ್ಮೀ ಯೋಜನೆಯ (Gruha laxmi)  ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿತ್ತು. ಆದರೆ ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿರಲಿಲ್ಲ.

ಇದನ್ನೂ ಓದಿ: ಗೃಹಲಕ್ಷ್ಮೀ ಹಣ, ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್​ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಏಪ್ರಿಲ್​​ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಾಂತರಗಳಿಂದ ಜೂನ್​ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿತ್ತು. ಈ ಹಣ ಇಂದು ಜಮಾವಣೆಯಾಗಲಿದೆ. ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ (DBT) ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.

ಜೂನ್​ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ಈ ಚಿಂತೆ ದೂರವಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Tue, 6 August 24