ರಾಜ್ಯದಲ್ಲಿ ಮೂರಂಕಿಗೆ ಇಳಿದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,062 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,91,095 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,080 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಎರಡನೇ ಅಲೆಯ ಭೀತಿಯ ನಡುವೆಯೇ ಹೊಸ ಕೊರೊನಾ ಕೇಸ್ಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರಲ್ಲಿ
ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ 1200-1400 ಪ್ರಕರಣ ಪತ್ತೆ ಆಗುತ್ತಿದ್ದವು. ಈಗ ಈ ಪ್ರಮಾಣ ಒಂದು ಸಾವಿರಕ್ಕಿಂತ ಕಡಿಮೆ ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 911 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,16,256 ಕ್ಕೇರಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಆಗಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,062 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,91,095 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,080 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 205 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 542 ಜನರಿಗೆ ಸೋಂಕು ಕಾಣಿಸಿಕೊಂಡಿದೆ. 11 ಜನರ ಪೈಕಿ 8 ಜನರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ.
Published On - 8:26 pm, Sun, 27 December 20