AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ‘ಹೈ ಅಲರ್ಟ್’: ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ

ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಟೊಮೆಟೊ ಜ್ವರ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲೂ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕ 'ಹೈ ಅಲರ್ಟ್': ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Aug 27, 2022 | 11:27 AM

Share

ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಟೊಮೆಟೊ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೂ ಕಾಲಿಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಆರೋಗ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನೆರೆಯ ರಾಜ್ಯ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮೇ 6ರಂದು ಮೊದಲ ಪ್ರಕರಣ ದಾಖಲಾಗಿತ್ತು. ಸದ್ಯ ಕೇರಳದಲ್ಲಿ ಈ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗಿದ್ದು, ತಮಿಳುನಾಡಿನಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಕರ್ನಾಟಕದಲ್ಲೂ ಅಕಾಲಿಕ ಮಳೆಯ ನಡುವೆ ಟೊಮೆಟೊ ಜ್ವರದ ಭೀತಿ ಎದುರಾದ ಹಿನ್ನೆಲೆ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಲು ಚಿಂತನೆ ನಡೆಸಿದೆ.

ಟೊಮೆಟೊ ಫ್ಲೂ ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆಯ ಬೆನ್ನಲ್ಲೆ ರಾಜ್ಯದಲ್ಲಿ ಟೊಮೆಟೊ ಜ್ವರ ಹೆಚ್ಚದಂತೆ ಅಗತ್ಯ ಕ್ರಮಕ್ಕೆ ನಿರ್ಧಾರ ಕೈಗೊಂಡಿರುವ ಆರೋಗ್ಯ ಇಲಾಖೆಯು, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಹಾಗೂ ಜನರ ಮೇಲೆ ನಿಗಾ ಇಡುವಂತೆ ಡಿಹೆಚ್​ಓಗಳಿಗೆ ಸೂಚನೆ ನೀಡಿದೆ.

ಮಕ್ಕಳಲ್ಲಿ ಬಹು ಬೇಗ ಹರಡುತ್ತಿರುವ ಫ್ಲೂ

ಟೊಮೆಟೊ ಜ್ವರವು ಮಕ್ಕಳಲ್ಲಿ ಅದರಲ್ಲೂ ಶಾಲೆಗೆ ಹೋಗುತ್ತಿರುವ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಭೀತಿ ಹೆಚ್ಚಾಗಿದೆ. ಈ ಜ್ವರವು ಮಕ್ಕಳಲ್ಲಿ ಬಹುಬೇಗನೆ ಹರಡುತ್ತಿದ್ದು, ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ಮಕ್ಕಳು ಕೈ ಬೆರಳುಗಳನ್ನು ಚೀಪುವುದುನ್ನು ತಪ್ಪಿಸುವಂತೆ ಪೋಷಕರಿಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.

ಟೊಮೆಟೊ ಜ್ವರದ ಲಕ್ಷಣಗಳು

ಮೊದಲಿಗೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ, ಮೈ ಕೈ, ಬಾಯಿ ಸುತ್ತ ಕೆಂಪು ಗುಳ್ಳೆಗಳು, ಅತಿಸಾರ, ಜ್ವರ, ವಾಂತಿ, ಮೈಕೈ‌ನೋವು ಟೊಮೆಟೊ ಜ್ವರದ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sat, 27 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!