ನಾಳೆ BBMP ನೌಕರರು ನಡೆಸಬೇಕಿದ್ದ ಮುಷ್ಕರ ವಾಪಸ್
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ […]
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಳೆ ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದರು. ಆದ್ರೆ, ಬೇಡಿಕೆ ಈಡೇರಿಸುವುದಾಗಿ ಬಿಬಿಎಂಪಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾಳೆ ನಡೆಸಬೇಕಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಟಿವಿ9ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ ರಾಜ್ ಸ್ಪಷ್ಟಪಡಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳು ನಾಳೆ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದರು. ಹೀಗಾಗಿ ನಾಳೆ ಬಿಬಿಎಂಪಿ ಕಚೇರಿಗಳು ಭಾಗಶಃ ಬಂದ್ ಆಗುವ ಸಾಧ್ಯತೆಯಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಟ್ಟಿದ್ದಾರೆ.
Published On - 6:22 pm, Tue, 10 December 19