AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ‌ ಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆ

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ನಾಳೆ‌ ಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆ
ನಾಳೆ‌ ಕರುನಾಡಲ್ಲಿ ಕರವೇ ಕಹಳೆ: ಕನ್ನಡಿಗರಿಗೆ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆ
Kiran Surya
| Edited By: |

Updated on: Jun 30, 2024 | 2:53 PM

Share

ಬೆಂಗಳೂರು, ಜೂನ್​ 30: ಕನ್ನಡಿಗರ ಉದ್ಯೋಗಕ್ಕೆ (employment) ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ಪ್ರಮುಖ ಬೇಡಿಕೆಗಳು ಹೀಗಿವೆ

  • ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ಬಲಿಷ್ಠ ಕಾನೂನೂ ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು.
  • ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆ 100% ಕನ್ನಡಿಗರಿಗೆ ಮೀಸಲಿಡಬೇಕು
  • ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ 80%ಕನ್ನಡಿಗರಿಗೆ ಮೀಸಲಿಡಬೇಕು.
  • ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.
  • ನಿಯಮ‌‌ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನ ವಾಪಾಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕು.

ಇದನ್ನೂ ಓದಿ: ಕನ್ನಡ ನಾಮಫಲಕ ಕಡ್ಡಾಯಕ್ಕೆ ಇಂದೇ ಡೆಡ್​ಲೈನ್! ಬಹುತೇಕ ಕಡೆ ಬದಲಾದ ಚಿತ್ರಣ, ಖಡಕ್ ಎಚ್ಚರಿಕೆ ಕೊಟ್ಟ ಕರವೇ

  • ರಾಜ್ಯ ಸರ್ಕಾರಿ ಸಂಸ್ಥೆ ಮತ್ತುಸಾರ್ವಜನಿಕ ವಲಯದಲ್ಲಿ 100% ಕನ್ನಡಿಗರಿಗೆ ಮೀಸಲಾತಿ.
  • ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ 100% ಕನ್ನಡಿಗರಿಗೆ ಮೀಸಲಾತಿ ನೀಡಬೇಕು.
  • ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ, ಡಿ ಹೊರತಾದ ಉಳಿದ ಉದ್ಯೋಗದಲ್ಲಿ 90% ಮೀಸಲಾತಿ ನೀಡಬೇಕು
  • ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಅಂಶವನ್ನ ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು.
  • ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.