ಅನರ್ಹರು ನಾಳೆ ಬಿಜೆಪಿ ಸೇರೋದು ಫಿಕ್ಸ್: ಯಡಿಯೂರಪ್ಪ
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅನರ್ಹ ಶಾಸಕರಿಗೆ ಉಪಚುನಾವಣೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ನಿಟ್ಟಿನಲ್ಲೇ ಅನರ್ಹ ಶಾಸಕರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಸಿಎಂ ಯಡಿಯೂರಪ್ಪ ಅನರ್ಹ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳಲು ಈಗ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಇಂದು ಕೋರ್ಟ್ ತೀರ್ಮಾನ ಸ್ವಾಗತಿಸುತ್ತಿದ್ದೇವೆ. ಅನರ್ಹ ಶಾಸಕರು ನಾಳೆ ಬೆಳಗ್ಗೆ ೧೦ ಗಂಟೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರೆ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ […]
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅನರ್ಹ ಶಾಸಕರಿಗೆ ಉಪಚುನಾವಣೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ನಿಟ್ಟಿನಲ್ಲೇ ಅನರ್ಹ ಶಾಸಕರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಸಿಎಂ ಯಡಿಯೂರಪ್ಪ ಅನರ್ಹ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳಲು ಈಗ ಮುಹೂರ್ತ ಫಿಕ್ಸ್ ಮಾಡಿದ್ದಾರೆ.
ಇಂದು ಕೋರ್ಟ್ ತೀರ್ಮಾನ ಸ್ವಾಗತಿಸುತ್ತಿದ್ದೇವೆ. ಅನರ್ಹ ಶಾಸಕರು ನಾಳೆ ಬೆಳಗ್ಗೆ ೧೦ ಗಂಟೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರೆ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿದ್ದಾರೆ. ಇಂದು ಟಿಕೆಟ್ ಹಂಚಿಕೆ ಬಗ್ಗೆ ಕೋರ್ಕಮಿಟಿಯಲ್ಲಿ ನಾವು ಚರ್ಚೆ ಮಾಡಿಲ್ಲ, ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡ್ತಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.