AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ

Tomorrow Weather Forecast :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ಅಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ
Karnataka Rains
ರಮೇಶ್ ಬಿ. ಜವಳಗೇರಾ
|

Updated on: Aug 27, 2025 | 4:38 PM

Share

ಬೆಂಗಳೂರು, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು  ದಿನ ಮಳೆ ಅಬ್ಬರಿಸುವ ಸಾಧ್ಯತೆ ಇದೆ.  ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದ್ದು,  ಆಗಸ್ಟ್ 28ರಂದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅದೇ ರೀತಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಆ.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಆ.30ರಂದು ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆ.31 ಮತ್ತು ಸೆ. 01ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಳೆ

ಕೆಲ ಐದಾರು ದಿನಗಳಿಂದ ಸೈಲೆಂಟ್ ಆಗಿದ್ದ ಮಳೆರಾಯ ಇಂದು (ಆಗಸ್ಟ್ 27) ಗಣೇಶ ಹಬ್ಬದಂದೇ ಅಬ್ಬರಿಸಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಹಗುರ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದರೆ, ಕೆಲವೆಡೆ ಮಳೆರಾಯ ಅಡ್ಡಿಸಿದ್ದಾನೆ.   ಗಣೇಶ ವಿಸರ್ಜೆ ಕಲಬುರಗಿ, ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಜನರಿಗೆ ಕಿರಿಕಿರಿ ಉಂಟು ಮಾಡಿದೆ.   ಮಳೆ ಇನ್ನೂ ಮೂರ್ನಾಲಕು ದಿನ ಇರುವುದರಿಂದ ಗಣೇಶ ವಿಸರ್ಜನೆಗೆ ಅಡ್ಡಿಯಾಗುವ ಸಾಧ್ಯತೆಗಳಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?