AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಹೇಗರಲಿದೆ ಮಳೆ? ಹವಾಮಾನ ಇಲಾಖೆ ಭವಿಷ್ಯ

Tomorrow Weather Forecast: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಗಳಲ್ಲಿ ಭಾರಿ ಮಳೆ ನಿರೀಕ್ಷೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪಲಿದೆ. ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ವಿವರ ಇಲ್ಲಿದೆ.

ನಾಳೆಯ ಹವಾಮಾನ: ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಹೇಗರಲಿದೆ ಮಳೆ? ಹವಾಮಾನ ಇಲಾಖೆ ಭವಿಷ್ಯ
ಮಳೆ
ವಿವೇಕ ಬಿರಾದಾರ
|

Updated on:Jul 30, 2025 | 7:10 PM

Share

ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಟ್ಟು ಬಿಡದೇ ಮಳೆಯಾಗುತ್ತಿತ್ತು. ರಾಜ್ಯಾದ್ಯಂತ ಇಂದಿನಿಂದ ಮುಂಗಾರು (Monsoon) ದುರ್ಬಲವಾಗಲಿದ್ದು, ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಗುರುವಾರ (ಜು.31) ದಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Meteorological Department) ಭವಿಷ್ಯ ನುಡಿದೆ.

ಉಳಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಜು.31) ಸಾಧಾರಣ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 1 ವಾರದ ಮಳೆ ಮುನ್ಸೂಚನೆ

ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಾಳಿಯ ವೇಗ ಎಷ್ಟಿರಲಿದೆ?

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 31 ಮತ್ತು ಆಗಸ್ಟ್​ 1 ರಂದು ಗಾಳಿಯು ಪ್ರತಿ ಗಂಟೆಗೆ 50-60 ಕಿಮೀ ವೇಗದಲ್ಲಿ ಬೀಸಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ.

ಮುಂದಿನ 4 ದಿನ ಬೆಂಗಳೂರು ವಾತಾವರಣ ಹೇಗಿರಲಿದೆ?

ಜುಲೈ 31 ರಿಂದ ಆಗಸ್ಟ್​ 3ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಮತ್ತು ಆಗಸ್ಟ್​ 2 ಮತ್ತು 3 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ.

ಇದನ್ನೂ ನೋಡಿ: ಪಶ್ಚಿಮಘಟ್ಟ ಸಾಲಿನಲ್ಲಿ ನಿಲ್ಲದ ಮಳೆ, ಉಕ್ಕಿ ಹರಿಯುತ್ತಿರುವ ಕೃಷ್ಣೆ, ಕುಡಚಿ-ಉಗಾರ ಸೇತುವೆ ಮುಳುಗಡೆ

ಬೆಂಗಳೂರು ಗ್ರಾಮಾಂತರದಲ್ಲಿ ಜುಲೈ 31 ರಿಂದ ಆಗಸ್ಟ್​ 3ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಆಗಸ್ಟ್​ 2 ಮತ್ತು 3 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Wed, 30 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!