ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಯಾವ್ಯಾವ ಜಿಲ್ಲೆಯಲ್ಲಿ?

Tomorrow Weather Forecast : ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಆಲರ್ಟ್ ನೀಡಲಾಗಿದ್ದರೆ, ಬಯಲು ಸೀಮೆಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಯಾವ್ಯಾವ ಜಿಲ್ಲೆಯಲ್ಲಿ?
ಮಳೆ (ಸಾಂದರ್ಭಿಕ ಚಿತ್ರ)

Updated on: Aug 05, 2025 | 4:05 PM

ಬೆಂಗಳೂರು, (ಆಗಸ್ಟ್ 05): ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನ ಮಳೆಯಾಗುವ (Karnataka Rain) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿ ಇಂದ ಅತಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾದಾರಣ ಮಳೆ ಆಗಸ್ಟ್ 8 ರವರೆಗೆ ಆಗುವ ಸಾಧ್ಯತೆಗಳಿವೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಆಲರ್ಟ್ ನೀಡಲಾಗಿದ್ದು, ಬಯಲು ಸೀಮೆಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ನಾಲ್ಕು ದಿನವೂ ಯೆಲ್ಲೋ ಆಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬಯಲು ಸೀಮೆಯ ಜಿಲ್ಲೆಗಳಾದ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ರಾಮನಗರ, ಮಂಡ್ಯ, ಹಾಸನ, ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.

ಆಗಸ್ಟ್ 6 ರಂದು ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಗುಡುಗು ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.  ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಿಗೂ ಆಗಸ್ಟ್ 5 ರಿಂದ ಆಗಸ್ಟ್ 8ರವರೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ