ನಾಳೆಯ ಹವಾಮಾನ: ಉತ್ತರ ಒಳನಾಡನ್ನು ಬೆಂಬಿಡದ ಚಳಿ; ಕಲ್ಯಾಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​

Karnataka Weather Tomorrow: ಕಳೆದ ವಾರದಿಂದ ಕರ್ನಾಟಕದಲ್ಲಿ ತೀವ್ರ ಚಳಿ ಆವರಿಸಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಿದೆ. ಫೆಸಿಪಿಕ್ ಮಹಾಸಾಗರದಲ್ಲಿನ ಲ್ಯಾನಿನೋ ಈ ಚಳಿಗೆ ಕಾರಣ. ಬೀದರ್, ಕಲಬುರಗಿ, ವಿಜಯಪುರದಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 17ರಿಂದ 23ರೊಳಗೆ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಉತ್ತರ ಒಳನಾಡನ್ನು ಬೆಂಬಿಡದ ಚಳಿ; ಕಲ್ಯಾಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​
ಚಳಿ

Updated on: Dec 16, 2025 | 5:47 PM

ಬೆಂಗಳೂರು, ಡಿಸೆಂಬರ್​​ 16: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಪರೀತ ಚಳಿ ಜನರ ನಿದ್ದೆಗೆಡಿಸಿದೆ. ಈ ನಡುವೆ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಇನ್ನು ಕನಿಷ್ಠ ತಾಪಮಾನಕ್ಕೆ ಫೆಸಿಪಿಕ್ ಮಹಾಸಾಗರದಲ್ಲಿನ ಲ್ಯಾನಿನೋ ಕಾರಣವಾಗಿದೆ. ಲ್ಯಾನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಹವಾಮಾನ ವಿದ್ಯಮಾನವಾಗಿದೆ.

ಕಲ್ಯಾಣ ಕರ್ನಾಟಕದ ಬೀದರ್​, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಚಳಿಯ ಪ್ರಮಾಣ ಅಧಿಕವಾಗಿರಲಿದೆ. ಈ ಭಾಗದ ಉಳಿದ ಜಿಲ್ಲೆಗಳ ಜೊತೆ ಉತ್ತರ ಮತ್ತು ಮಧ್ಯ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲೂ ಜನರಿಗೆ ಚಳಿಯ ಅನುಭವ ಆಗಲಿದೆ. ಉತ್ತರ ಒಳನಾಡನ ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ಒಣ ಹವೆ ಅಥವಾ ಸಾಧಾರಣ ಚಳಿ ಕಂಡುಬರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೂ ಚಳಿಯ ಅನುಭವ ಆಗಲಿದೆ.

ಇದನ್ನೂ ಓದಿ:  ಬೆಂಗಳೂರಿನಲ್ಲಿ 8 ವರ್ಷಗಳಲ್ಲೇ ಮೊದಲ ಬಾರಿಗೆ ಕನಿಷ್ಠ ತಾಪಮಾನ

ನಿನ್ನೆ ಬೀದರ್​​ನಲ್ಲಿ ಕನಿಷ್ಠ ತಾಪಮಾನ


ಬಾಗಲಕೋಟೆ 13.8 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.7 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 13 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 14 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 15.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.7 ಡಿಗ್ರಿ ಸೆಲ್ಸಿಯಸ್, ಬೀದರ್ 11 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 14.2 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 14.3 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13.4 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 14.6 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 18.4 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 14.2 ಡಿಗ್ರಿ ಸೆಲ್ಸಿಯಸ್, ಧಾರವಾಡ 13.2 ಡಿಗ್ರಿ ಸೆಲ್ಸಿಯಸ್, ಗದಗ 13.9 ಡಿಗ್ರಿ ಸೆಲ್ಸಿಯಸ್, ಹಾಸನ 12.8 ಡಿಗ್ರಿ ಸೆಲ್ಸಿಯಸ್, ಹಾವೇರಿ 13.3 ಡಿಗ್ರಿ ಸೆಲ್ಸಿಯಸ್, ಕಲಬುರಗಿ 12.3 ಡಿಗ್ರಿ ಸೆಲ್ಸಿಯಸ್, ಕೊಡಗು 15.2 ಡಿಗ್ರಿ ಸೆಲ್ಸಿಯಸ್, ಕೋಲಾರ 15.5 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 13.4 ಡಿಗ್ರಿ ಸೆಲ್ಸಿಯಸ್, ಮಂಡ್ಯ 13.9 ಡಿಗ್ರಿ ಸೆಲ್ಸಿಯಸ್, ಮೈಸೂರು 14 ಡಿಗ್ರಿ ಸೆಲ್ಸಿಯಸ್, ರಾಯಚೂರು 13.7 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 14.1 ಡಿಗ್ರಿ ಸೆಲ್ಸಿಯಸ್, ತುಮಕೂರು 18.1 ಡಿಗ್ರಿ ಸೆಲ್ಸಿಯಸ್, ಉಡುಪಿ 16.6 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 16.6 ಡಿಗ್ರಿ ಸೆಲ್ಸಿಯಸ್, ವಿಜಯಪುರ 13.4 ಡಿಗ್ರಿ ಸೆಲ್ಸಿಯಸ್, ವಿಜಯನಗರ 12.9 ಡಿಗ್ರಿ ಸೆಲ್ಸಿಯಸ್ ಮತ್ತು ಯಾದಗಿರಿಯಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಬೆಳಿಗ್ಗೆ 8.30ರ ಅವಧಿಯಲ್ಲಿ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.