AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಇನ್ನಷ್ಟು ದಿನ ಭಾರೀ ಮಳೆ, ಎಷ್ಟು ದಿನ? ಎಲ್ಲೆಲ್ಲಿ?

Tomorrow Weather Forecast: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 31ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಇನ್ನಷ್ಟು ದಿನ ಭಾರೀ ಮಳೆ, ಎಷ್ಟು ದಿನ? ಎಲ್ಲೆಲ್ಲಿ?
ಮಳೆ
ಗಂಗಾಧರ​ ಬ. ಸಾಬೋಜಿ
|

Updated on:Aug 28, 2025 | 7:59 PM

Share

ಬೆಂಗಳೂರು, ಆಗಸ್ಟ್​ 28: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಇತ್ತ ಕರ್ನಾಟಕದ (Karnataka) ಹಲವೆಡೆ ಮಳೆ (Rain) ಆಗುತ್ತಿದೆ. ಆಗಸ್ಟ್ 31ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಕೂಡ ಇದೆ. ಬೆಂಗಳೂರಿನಲ್ಲಿ ನಾಳೆ ಕೂಡ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ವಿಜ್ಞಾನಿ ಸಿ.ಎಸ್ ಪಾಟೀಲ್ ಹೇಳಿದ್ದಿಷ್ಟು

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್ ಪಾಟೀಲ್, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನಾಳೆ ಕೂಡ ವ್ಯಾಪಕ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಕೂಡ ನಾಳೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಕನರ, ಚಿಕ್ಕಬಳ್ಳಾಪುರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್​ ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ (ಗಂಟೆಗೆ 30ರಿಂದ40 ಕಿ.ಮಿ) ಗುಡುಗು ಸಹಿತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ, ಎಷ್ಟು ಮಳೆ?

ಇಂದು ಉತ್ತರ, ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 17 ಸೆಂ.ಮೀ, ಯಾದಗಿರಿ ಜಿಲ್ಲೆಯಲ್ಲಿ 7 ಸೆಂ.ಮೀ, ಆಗುಂಬೆ ಹಾಗೂ ಶಿವಮೊಗ್ಗದಲ್ಲಿ 11 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: ನಾಳೆಯ ಹವಾಮಾನ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ, ಚೌತಿಗೆ ವರುಣನ ಅಡ್ಡಿ

ಎರಡು ದಿನ ಬಿಡುವು ಕೊಟ್ಟಂತೆ ಮಾಡಿದ್ದ ಮಳೆ ಮತ್ತೆ ಅಬ್ಬರಿಸಿದೆ. ಬುಧವಾರ ಸುರಿದ ಮಳೆಗೆ ಕರ್ನಾಟಕದ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಊರಿಗೆ ಊರೇ ಜಲಾವೃತವಾಗಿವೆ. ಮನೆ ಗೋಡೆಗಳೇ ಕುಸಿದಿವೆ. ನದಿಗಳು ಅಬ್ಬರಿಸಿ ಬೊಬ್ಬರಿಯುತ್ತಿವೆ. ಮಳೆ ಹೊಡೆತಕ್ಕೆ ಜನ, ಜಾನುವಾರಗಳು ತತ್ತರಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:58 pm, Thu, 28 August 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ