ಹಿರಿಯ ಪತ್ರಕರ್ತರಾದ ವಿಲಾಸ್ ನಾಂದೋಡ್ಕರ್, ರಘುನಾಥ್​ಗೆ ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ

ಟಿವಿ9 ವಾಹಿನಿಯ ಪ್ರಧಾನ ಕಾರ್ಯಕ್ರಮ ನಿರ್ಮಾಪಕರಾದ ವಿಲಾಸ್ ನಾಂದೋಡ್ಕರ್ ಹಾಗೂ ಸುಧಾ, ಮಯೂರ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಘುನಾಥ ಚ.ಹ ಅವರಿಗೆ ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ ಲಭಿಸಿದೆ.

ಹಿರಿಯ ಪತ್ರಕರ್ತರಾದ ವಿಲಾಸ್ ನಾಂದೋಡ್ಕರ್, ರಘುನಾಥ್​ಗೆ ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ
ವಿಲಾಸ್ ನಾಂದೋಡ್ಕರ್, ರಘುನಾಥ ಚ.ಹ
Follow us
ವಿವೇಕ ಬಿರಾದಾರ
|

Updated on: Jul 02, 2024 | 9:28 AM

ಗದಗ, ಜುಲೈ 02: ಜಿಲ್ಲೆಯ ಡಂಬಳ (Dambal) ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿ ಲಿಂ. ಡಾ.ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿಗಾಗಿ ಪ್ರತಿವರ್ಷ ನೀಡುವ ರಾಜ್ಯಮಟ್ಟದ ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರಕ್ಕೆ 2024ನೇ ಸಾಲಿನಲ್ಲಿ ಹಿರಿಯ ಪತ್ರಕರ್ತರಾದ, ಟಿವಿ9 ವಾಹಿನಿಯ ಇನ್​​ಪುಟ್​ ಹೆಡ್​​, ಪ್ರಧಾನ ಕಾರ್ಯಕ್ರಮ ನಿರ್ಮಾಪಕರಾದ ವಿಲಾಸ್ ನಾಂದೋಡ್ಕರ್ (Vilas Nandodkar) ಹಾಗೂ ಸುಧಾ, ಮಯೂರ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಘುನಾಥ ಚ.ಹ ಅವರು ಭಾಜನರಾಗಿದ್ದಾರೆ.

ಧಾರವಾಡ ಹಾಗೂ ತುಮಕೂರು ಜಿಲ್ಲೆಯವರಾದ ಇಬ್ಬರೂ ಹಿರಿಯ ಪತ್ರಕರ್ತರು ಸುಮಾರು ಎರಡು ದಶಕಗಳಿಗೂ ಅಧಿಕ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ದೃಶ್ಯ ಮಾಧ್ಯಮದಲ್ಲಿ ವಿಲಾಸ್ ನಾಂದೋಡ್ಕರ್ ಅವರು ಛಾಪು ಮೂಡಿಸಿದ್ದರೆ, ಪತ್ರಕರ್ತ ವೃತ್ತಿಯ ಜೊತೆಗೆ ಸಾಹಿತಿಯಾಗಿಯೂ ಗುರುತಿಸಿಕೊಂಡ ರಘುನಾಥ ಚ.ಹ ಅವರು 10ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಹೆಸರಾದವರು.

ಪ್ರಶಸ್ತಿ ಗೌರವ ತಲಾ 5000 ನಗದು ಬಹುಮಾನ, ಗೌರವ ಫಲಕ ಹೊಂದಿದ್ದು ಜುಲೈ ತಿಂಗಳಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪುರಸ್ಕಾರ ಸಮಿತಿಯ ಸಂಚಾಲಕರಾದ ಡಾ. ಶಶಿಧರ್ ತೋಡ್ಕರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ವಿಲಾಸ್ ನಾಂದೋಡ್ಕರ್ ಅವರು 2022ನೇ ಸಾಲಿನ ಪ್ರೆಸ್‌ ಕ್ಲಬ್‌ ಆಫ್‌ ಬೆಂಗಳೂರು ಪ್ರಶಸ್ತಿಗೆ ಭಾಜನರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್