CM Janaspandana: ಸಿಎಂ ಜನಸ್ಪಂದನದಲ್ಲಿ 12372 ಅರ್ಜಿ ಸ್ವೀಕಾರ: ಯಾವ ಇಲಾಖೆಗೆ ಎಷ್ಟೆಷ್ಟು ಅರ್ಜಿ? ಇಲ್ಲಿದೆ ವಿವರ
ಕಣ್ಣೀರಿನ ನೋವು. ಪಟ್ಟ ಕಷ್ಟದ ಕರಾಳ ಕತೆಗಳು. ಸಮಸ್ಯೆಗಳ ಸಾಗರವೇ ಸಿಎಂ ಜನಸ್ಪಂದನೆ ಕಾರ್ಯಕ್ರಮಕ್ಕೆ ಹೊತ್ತು ತಂದಿದ್ದಾರೆ. ಹೌದು..ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಖುದ್ದಾಗಿ ಅಹವಾಲು ಸ್ವೀಕರಿಸಿರೋ ಸಿಎಂ ಸಿದ್ದರಾಮಯ್ಯ, ಸಮಸ್ಯೆಗೆ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ. ಹಾಗಾದ್ರೆ, ಸಿಎಂ ಜನಸ್ಪಂದನಕ್ಕೆ ಎಷ್ಟು ಅರ್ಜಿಗಳು ಬಂದಿವೆ? ಎಷ್ಟು ಇತ್ಯರ್ಥವಾಗಿವೆ? ಎಷ್ಟು ಬಾಕಿ? ಯಾವ ಇಲಾಖೆಗೆ ಎಷ್ಟು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು, (ಫೆಬ್ರವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜ್ಯ ಮಟ್ಟದ ಎರಡನೇ ಜನಸ್ಪಂದನ (CM Janaspandana)ಕಾರ್ಯಕ್ರಮಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಜನಸಾಗರವೇ ಹರಿದುಬಂದಿದೆ. ಇಂದು (ಫೆ.08) ಬೆಳಗ್ಗೆ 11 ಗಂಟೆಯಿಂದಲೇ ಸಿಎಂ ಸಿದ್ದರಾಮಯ್ಯ ಅವರು ನಾಗರಿಕರ ಅಹವಾಲುಗಳನ್ನು ಆಲಿಸಿದ್ದಾರೆ. ಒಟ್ಟು 12372 ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ. ಈ ಪೈಕಿ.246 ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಗೊಳಿಸಿದ್ದು, 12,126 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ. ಇನ್ನು ಯಾವ-ಯಾವ ಇಲಾಖೆ ಎಷ್ಟು ಅರ್ಜಿ ಬಂದಿವೆ ಎನ್ನುವುದು ಈ ಕೆಳಗಿನಂತಿದೆ.
ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು
ಸಿಎಂ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಅತಿ ಅರ್ಜಿಗಳು ಬಂದಿವೆ. ಜಮೀನು, ಸಾಗುವಳಿ ಸೇರಿದಂತೆ ಕಂದಾಯ ಇಲಾಖೆಯಿಂದ ಎದುರಿಸುತ್ತಿರುವ ಸಮಸ್ಯೆಯನ್ನು ಜನರು ಹೊತ್ತಿತಂದಿದ್ದಾರೆ. ಒಟ್ಟು 12372 ಅರ್ಜಿಗಳ ಪೈಕಿ ಕಂದಾಯ ಇಲಾಖೆಗೆ 3150 ಅರ್ಜಿಗಳು ಬಂದಿವೆ. ಈ ಮೂಲಕ ಕಂದಾಯ ಇಲಾಖೆ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ . ವಸತಿ ಇಲಾಖೆ ಇದೆ.
ಇದನ್ನೂ ಒದಿ: ಸಿಎಂ 2ನೇ ಜನಸ್ಪಂದನಕ್ಕೆ ಬಂದ ಅರ್ಜಿಗಳು ಎಷ್ಟು? ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು..!
ಕಂದಾಯ ಇಲಾಖೆ ನಂತರ ಸ್ಥಾನದಲ್ಲಿರುವ ವಸತಿ ಇಲಾಖೆಗೆ ಒಟ್ಟು 1500 ಅರ್ಜಿಗಳು ಬಂದಿವೆ. ಸಮಾಜ ಕಲ್ಯಾಣ ಇಲಾಖೆಗೆ 1065, ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.
ಸ್ವೀಕೃತವಾದ ಅರ್ಜಿಗಳ ಇಲಾಖಾವಾರು ವಿವರ
- ಹಿಂದುಳಿದ ವರ್ಗಗಳ ಇಲಾಖೆ – 543
- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಆಡಳಿತ ಸುಧಾರಣೆ) – 5
- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಇ. ಆಡಳಿತ) – 0
- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 60
- ಸಾರ್ವಜನಿಕ ಉದ್ದಿಮೆಗಳ ಇಲಾಖೆ – 0
- ಸಾರಿಗೆ ಇಲಾಖೆ – 163
- ಸಹಕಾರ ಇಲಾಖೆ – 138
- ಸಮಾಜ ಕಲ್ಯಾಣ- 870
- ಸಣ್ಣ ನೀರಾವರಿ ಇಲಾಖೆ – 37
- ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ – 0
- ಸಂಸದೀಯ ವ್ಯವಹಾರಗಳ ಇಲಾಖೆ -0
- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ – 670
- ವೈದ್ಯಕೀಯ ಶಿಕ್ಷಣ ಇಲಾಖೆ – 68
- ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ -05
- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ – 11
- ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ – 217
- ವಸತಿ ಇಲಾಖೆ – 1500
- ಲೋಕೋಪಯೋಗಿ ಇಲಾಖೆ – 62
- ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ – 04
- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ – 18
- ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ – 06
- ಮುಖ್ಯ ಕಾರ್ಯದರ್ಶಿ ಯವರ ಕಚೇರಿ – 01
- ಮುಖ್ಯ ಮಂತ್ರಿಯವರ ಕಾರ್ಯಾಲಯ -0
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 903
- ಪ್ರವಾಸೋದ್ಯಮ ಇಲಾಖೆ – 22
- ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ – 144
- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ – 88
- ನಗರಾಭಿವೃದ್ಧಿ ಇಲಾಖೆ – 600
- ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 67
- ಜಲ ಸಂಪನ್ಮೂಲ ಇಲಾಖೆ – 143
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 520
- ಗೃಹ ಇಲಾಖೆ – 384
- ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ.ಮತ್ತು ಜೀವನೋಪಾಯ ಇಲಾಖೆ – 256
- ಕೃಷಿ ಇಲಾಖೆ – 88
- ಕಾರ್ಮಿಕ ಇಲಾಖೆ – 64
- ಕಾನೂನು ಇಲಾಖೆ – 17
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ – 49
- ಕಂದಾಯ ಇಲಾಖೆ – 3150
- ಉನ್ನತ ಶಿಕ್ಷಣ ಇಲಾಖೆ – 185
- ಇಂಧನ ಇಲಾಖೆ – 250
- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 280
- ಆರ್ಥಿಕ ಇಲಾಖೆ – 81
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- 280
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ – 106
- ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ – 120
5 ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ
ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆಗಳಿಗೆ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ. ಇಲಾಖೆಗಳು ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
1 ತಿಂಗಳೊಳಗೆ ಜನ ಸ್ಪಂದನೆ ಅರ್ಜಿ ಬಗೆಹರಿಸಿ ಎಂದ ಸಿಎಂ
ಎರಡನೇ ಜನಸ್ಪಂದನದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿನ ಜನಸ್ಪಂದನೆಯಲ್ಲಿ ಒಟ್ಟು 20 ಸಾವಿರ ಮಂದಿ ಭಾಗಿಯಾಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆಹರಿಸುತ್ತಾರೆ. ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ ಶೇ. 98ರಷ್ಟಕ್ಕೆ ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:29 pm, Thu, 8 February 24