AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ: ಯಾವ್ಯಾವ ಇಲಾಖೆಯಲ್ಲಿ ಎಷ್ಟು? ನೇಮಕಾತಿ ಎಷ್ಟು?

ಕರ್ನಾಟಕದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. ಬೆಳಗಾವಿ ಅಧಿವೇಶದಲ್ಲಿ ವಿಪಕ್ಷ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯನವರು 2.84 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಪೈಕಿ ಕೆಲ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹಾಗಾದ್ರೆ, ಯಾವ್ಯಾವ ಇಲಾಖೆ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಷ್ಟು ಹುದ್ದೆಗಳ ನೇಮಕ್ಕೆ ಅನುಮೋದನೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಕರ್ನಾಟಕದಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ: ಯಾವ್ಯಾವ ಇಲಾಖೆಯಲ್ಲಿ ಎಷ್ಟು? ನೇಮಕಾತಿ ಎಷ್ಟು?
Vidhana Soudha
ರಮೇಶ್ ಬಿ. ಜವಳಗೇರಾ
|

Updated on:Dec 11, 2025 | 5:30 PM

Share

ಬೆಳಗಾವಿ, (ಡಿಸೆಂಬರ್ 12): ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಯಲ್ಲಿ ಬರೋಬ್ಬರಿ 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿ (Karnataka Government Jobs) ಇವೆ.  ಹೀಗಾಗಿ ಬಹುತೇಕ ಸರ್ಕಾರಿ ಇಲಾಖೆಗಳು ಖಾಲಿ ಖಾಲಿ ಹೊಡೆಯುತ್ತಿವೆ.  ಇನ್ನು  2.84 ಲಕ್ಷ  ಖಾಲಿ ಹುದ್ದೆಗಳ ಪೈಕಿ ಸರ್ಕಾರ ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

ಕೃಷಿ ಇಲಾಖೆ – 6876, ಪಶುಸಂಗೋಪನೆ – 11020,ಹಿಂದುಳಿದ ವರ್ಗಗಳ ಕಲ್ಯಾಣ- 8525, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ – 6190, ಹಣಕಾಸು ಇಲಾಖೆ-7668, ಮೀನುಗಾರಿಕೆ – 838, ಆಹಾರ ಮತ್ತು ನಾಗರೀಕ ಪೂರೈಕೆ- 1442, ಅರಣ್ಯ – 6478, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ – 37,572, ಉನ್ನತ ಶಿಕ್ಷಣ – 13,599, ಒಳಾಡಳಿತ ಇಲಾಖೆ (ಪೊಲೀಸ್ ಸೇರಿ)- 28,188, ಕಾನೂನು – 7659, ಅಲ್ಪಸಂಖ್ಯಾತ ಕಲ್ಯಾಣ- 4972, ಕಂದಾಯ – 10867, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ – 10504, ಪರಿಶಿಷ್ಟ ಜಾತಿ ಕಲ್ಯಾಣ- 9646, ಶಿಕ್ಷಣ – 79,694, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ – 3391 ಹುದ್ದೆಗಳು ಖಾಲಿ ಇವೆ.

ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

ಸದನಕ್ಕೆ ಮಾಹಿತಿ ನೀಡಿದ ಸಿದ್ದರಾಮಯ್ಯ

ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಇಂದು (ಡಿಸೆಂಬರ್ 11) ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದು, ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದಾರೆ. ಇದಕ್ಕೆ ಉತ್ತರಿಸಿದ ಸಿಎಂ, ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಕ್ರೀಡಾಪಟುಗಳಿಗೆ ನೇಮಕಾತಿ ಮೀಸಲಾತಿ

ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಶೇ.9 ಹುದ್ದೆಗಳ ನೇಮಕಾತಿ

ರಾಜ್ಯದ ವಿವಿಧ ಸರ್ಕಾರಿ ಮತ್ತು ಅರೆ-ಸರ್ಕಾರಿ ಇಲಾಖೆಗಳಲ್ಲಿ ಒಟ್ಟಾರೆ 2,84,881 ಹುದ್ದೆಗಳು ಭರ್ತಿಗಾಗಿ ಬಾಕಿ ಉಳಿದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದ್ರೆ,  ಈ ಪೈಕಿ ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಲು ಮಂಜೂರಾತಿ ನೀಡಿದೆ. ಕಂದಾಯ, ಸಾರಿಗೆ, ಇಂಧನ, ಆರ್ಥಿಕ, ಶಿಕ್ಷಣ, ಕೃಷಿ ಇಲಾಖೆಗಳಲ್ಲಿ ಹೆಚ್ಚಿನ ಹುದ್ದೆಯನ್ನು ಭರ್ತಿಗೆ ಮಂಜೂರಾತಿ ನೀಡಿದೆ. ಒಟ್ಟು 32 ಇಲಾಖೆಗಳಲ್ಲಿ ಎ ವೃಂದದಲ್ಲಿ 562, ಬಿ ವೃಂದದಲ್ಲಿ 619, ಸಿ- 23,119 ಸೇರಿದಂತೆ ಒಟ್ಟು 24,300 ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಿದೆ.

2,84,881 ಖಾಲಿ ಹುದ್ದೆಗಳ ಪೈಕಿ ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ಈ ಅಲ್ಪ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Thu, 11 December 25