ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 8 ಜನರಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ. 520 ಸೋಂಕಿತರ ಪೈಕಿ 198 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿತ 520 ಜನರ ಪೈಕಿ 20 ಮಂದಿ ಮೃತಪಟ್ಟಿದ್ದಾರೆ. ಉಳಿದ 302 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿಯಲ್ಲಿ ಹೊಸದಾಗಿ 6 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು, ಗದಗದಲ್ಲಿ ತಲಾ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಹೊಸದಾಗಿ 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಇಳಿಕೆಯಾಗ್ತಿದೆ. ನಿನ್ನೆಯೂ ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ದಾಖಲಾಗಿತ್ತು. ಇಂದೂ ಸಹ ಕೇವಲ ಒಂದೇ ಒಂದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಒಟ್ಟು 135 ಮಂದಿಗೆ ಸೋಂಕು ತಗುಲಿದೆ.
Published On - 12:16 pm, Tue, 28 April 20