ರಾಜ್ಯದಲ್ಲಿ ಹೊಸದಾಗಿ 9 ಜನರಿಗೆ ಕೊರೊನಾ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ರಾಜ್ಯದಲ್ಲಿ ಹೊಸದಾಗಿ 9 ಜನರಿಗೆ ಕೊರೊನಾ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 9 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಲಬುರಗಿಯಲ್ಲಿ 8, ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ತಗುಲಿದೆ.

532 ಸೋಂಕಿತರ ಪೈಕಿ 215 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 532 ಜನರ ಪೈಕಿ 20 ಜನರು ಮೃತಪಟ್ಟಿದ್ದಾರೆ. ಉಳಿದ 297 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ನೀಡಿದೆ. https://www.facebook.com/Tv9Kannada/videos/551716332448047/

Published On - 12:30 pm, Wed, 29 April 20

Click on your DTH Provider to Add TV9 Kannada