ದಸರಾ ಹಬ್ಬದ ವೇಳೆ ತಲಕಾಡು ಗಂಗರ ಉತ್ಸವ ಆಯೋಜನೆ: ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಘೋಷಣೆ

ಮೈಸೂರಿನಲ್ಲಿ ಹೆಲಿ ಟೂರಿಸಂ ಆದಷ್ಟು ಬೇಗ ಪ್ರಾರಂಭವಾಗಲಿದ್ದು, ಸದ್ಯದ ವಿರೋಧಗಳನ್ನು ಗಮನಿಸಿ ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಯೋಜನೆಯನ್ನು ಪ್ರಾರಂಭಿಸುತ್ತೇವೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ಬಳಕೆ ಮಾಡಿಕೊಂಡು ಹೆಲಿ ಟೂರಿಸಂ ಅರಂಭಿಸಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮಾಹಿತಿ ನೀಡಿದರು.

ದಸರಾ ಹಬ್ಬದ ವೇಳೆ ತಲಕಾಡು ಗಂಗರ ಉತ್ಸವ ಆಯೋಜನೆ: ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಘೋಷಣೆ
ಸಚಿವ ಸಿ.ಪಿ.ಯೋಗೇಶ್ವರ್
Follow us
TV9 Web
| Updated By: guruganesh bhat

Updated on:Jul 19, 2021 | 6:22 PM

ಮೈಸೂರು: ಇನ್ನುಮುಂದೆ ಪ್ರತಿ ವರ್ಷ ದಸರಾ ಹಬ್ಬದಲ್ಲಿ ತಲಕಾಡು ಗಂಗರ ಉತ್ಸವ (Talakadu Ganga) ಆಯೋಜಿಸುತ್ತೇವೆ. ಇದರಿಂದ ತಲಕಾಡಿನ ಅಭಿವೃದ್ಧಿ ಸಾಧ್ಯ. ಈ ವಿವಿಧ ಇಲಾಖೆಗಳ ಜೊತೆ ಚರ್ಚೆ ಮಾಡಿ ರೂಪುರೇಷೆ ಮಾಡುತ್ತೇನೆ. ತಲಕಾಡು ಗಂಗರ ಉತ್ಸವ ನಡೆಸಲು ತಲಕಾಡು ಅಭಿವೃದ್ಧಿ ಸಮಿತಿ ರಚಿಸುತ್ತೇವೆ. ತಲಕಾಡು ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಸ್ಥಳವಾಗಿದ್ದು ಇನ್ನೂ ಹೆಚ್ಚಿನ ಜನರಿಗೆ ಪರಿಚಯವಾಗಬೇಕಿದೆ. ಇಂತಹ ಸ್ಥಳದ ಅಭಿವೃದ್ಧಿ ಅವಶ್ಯಕತೆ ಇದೆ. ಆದರೆ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಈ ಕೊರತೆಯನ್ನು ಸರಿಪಡಿಸಲು ಉತ್ಸವಗಳ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ‌.ಪಿ.ಯೋಗೇಶ್ವರ್   (Tourism Minister CP Yogeshwar) ಟಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ತಿಳಿಸಿದರು.

ಮೈಸೂರಿನಲ್ಲಿ ಹೆಲಿ ಟೂರಿಸಂ ಆದಷ್ಟು ಬೇಗ ಪ್ರಾರಂಭವಾಗಲಿದ್ದು, ಸದ್ಯದ ವಿರೋಧಗಳನ್ನು ಗಮನಿಸಿ ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಯೋಜನೆಯನ್ನು ಪ್ರಾರಂಭಿಸುತ್ತೇವೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ಬಳಕೆ ಮಾಡಿಕೊಂಡು ಹೆಲಿ ಟೂರಿಸಂ ಅರಂಭಿಸಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮಾಹಿತಿ ನೀಡಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಸಿ.ಪಿ.ಯೋಗೇಶ್ವರ್​ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ನಾನು ಏನೇ ಮಾತನಾಡಿದರೂ ತಪ್ಪಿಗೆ ಸಿಲುಕಿಕೊಳ್ಳುತ್ತೇನೆ. ಕಳೆದ 3 ದಿನಗಳಿಂದ ನಾನು ಕೊಡಗು ಜಿಲ್ಲೆಯಲ್ಲಿದ್ದೆ. ಯಾವುದೇ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿಯಿಲ್ಲ. ರಾಜಕೀಯದ ಬಗ್ಗೆ ಮಾತನಾಡಲು ನಾನು ಇಷ್ಟಪಡುವುದಿಲ್ಲ ಎಮದು ವಿವರಿಸಿದರು.

ಇದನ್ನೂ ಓದಿ: 

ಚನ್ನಪಟ್ಟಣದಿಂದಲೇ ಬಿಜೆಪಿ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಚಿವ ಸಿ ಪಿ ಯೋಗೇಶ್ವರ್ ದೃಢ ನುಡಿ

Tv9 Digital Exclusive: ಕಾವೇರಿಯ ಮತ್ತಷ್ಟು ನೀರು ಬಳಕೆಗೆ ತಮಿಳುನಾಡು ಯೋಜನೆ: ಸುಪ್ರೀಂಕೋರ್ಟ್​ಗೆ ಕರ್ನಾಟಕ ತಕರಾರು ಅರ್ಜಿ

(Tourism Minister CP Yogeshwar announces Talakadu Ganga festival during Dasara)

Published On - 6:17 pm, Mon, 19 July 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ