ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್ನಲ್ಲಿ ಪ್ರವಾಸಿಗರು ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್ಗೆ ಬೋಟ್ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:25 am, Tue, 10 December 19