ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಟೊಯೊಟಾದಿಂದ ಶುಭ ಸುದ್ದಿ!

ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಟೊಯೊಟಾ ಕಿರ್ಲೋಸ್ಕರ್‌ ಕಂಪನಿ ಶುಭ ಸುದ್ದಿ ನೀಡಿವೆ. ರಾಮನಗರ ಮತ್ತು ಬಿಡದಿ ಸುತ್ತಮುತ್ತಲಿನ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟೊಯೊಟಾ ಕಿರ್ಲೋಸ್ಕರ್ ಕೈಗಾರಿಕೆಗಳಿಗೆ ಭೇಟಿ ನೀಡಿ ತರಬೇತಿ ಪಡೆಯಬಹುದು. ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಟೊಯೊಟಾದಿಂದ ಶುಭ ಸುದ್ದಿ!
ಟೊಯೊಟಾ ಕಿರ್ಲೋಸ್ಕರ್‌
Follow us
Ganapathi Sharma
|

Updated on: Feb 24, 2024 | 10:55 AM

ಬೆಂಗಳೂರು, ಫೆಬ್ರವರಿ 24: ಸರ್ಕಾರಿ ಕಾಲೇಜುಗಳ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ (Government Colleges) ವಿದ್ಯಾರ್ಥಿಗಳಿಗೆ ಅವರ ಕೋರ್ಸ್ ಅವಧಿಯಲ್ಲಿ ಕೌಶಲ ತರಬೇತಿ (Skill Training) ನೀಡಲು ಉನ್ನತ ಶಿಕ್ಷಣ ಇಲಾಖೆಯು ಟೊಯೊಟಾ ಕಿರ್ಲೋಸ್ಕರ್‌ನೊಂದಿಗೆ (Toyota Kirloskar) ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ಭಾಗವಾಗಿ ರಾಮನಗರ ಮತ್ತು ಬಿಡದಿ ಸುತ್ತಮುತ್ತಲಿನ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಟೊಯೊಟಾ ಕಿರ್ಲೋಸ್ಕರ್ ಕೈಗಾರಿಕೆಗಳಿಗೆ ಭೇಟಿ ನೀಡಿ ತರಬೇತಿ ಪಡೆಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ತಿಳಿಸಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್ ರಾಜ್ಯಾದ್ಯಂತ ಎಲ್ಲಾ ಕಾಲೇಜುಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇಲಾಖೆಯು ಸಂಶೋಧನೆ ಮತ್ತು ತರಬೇತಿಗಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜೆಲ್ಯಾಂಡ್ ಮೂಲದ ಎಂಟು ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ವಿಶ್ವವಿದ್ಯಾಲಯಗಳಲ್ಲಿ ಸುಮಾರು 10 ಸರ್ಕಾರಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಸಂಶೋಧನೆ ಮತ್ತು ತರಬೇತಿ ಅವಕಾಶಗಳನ್ನು ಪಡೆಯಲಿವೆ.

ಎಲ್ಲಾ ಒಪ್ಪಂದಗಳು ಸಂಪೂರ್ಣವಾಗಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ ರೂಪಿತಗೊಂಡಿವೆ ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ ಮೂರನೇ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಹೆಚ್ಚುವರಿ 3,300 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಟೊಯೊಟಾ ಕಿರ್ಲೋಸ್ಕರ್ ಕೆಲವು ತಿಂಗಳುಗಳ ಹಿಂದೆ ಹೇಳಿತ್ತು. ಹೊಸ ಘಟಕವು 2026 ರ ವೇಳೆಗೆ ಒಂದು ಲಕ್ಷ ಯುನಿಟ್‌ಗಳ ವಾರ್ಷಿಕ ಸಾಮರ್ಥ್ಯವನ್ನು ಹೊಂದಲಿದೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಘಟಕವು ಬಿಡದಿಯಲ್ಲಿರುವ ಅಸ್ತಿತ್ವದಲ್ಲಿರುವ 432-ಎಕರೆ ಕ್ಯಾಂಪಸ್‌ನಲ್ಲಿ ಸ್ಥಾಪಿಸಲ್ಪಡಲಿದೆ. ಹೆಚ್ಚುವರಿಯಾಗಿ 2,000 ನೇರ ಉದ್ಯೋಗ ಸೃಷ್ಟಿಸಲಿದೆ ಎಂದು ಕಂಪನಿಯು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ವೇಳೆ ತಿಳಿಸಿತ್ತು.

ಇದನ್ನೂ ಓದಿ: ಬಾಂಗ್ಲಾ ಪ್ರಜೆಗಳ ಅಕ್ರಮ ಮಾನವ ಕಳ್ಳಸಾಗಣೆ: ಇಬ್ಬರನ್ನು ಬಂಧಿಸಿದ ಎನ್​ಐಎ

ಟೊಯೊಟಾ 1997 ರಲ್ಲಿ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. 1999 ರ ಡಿಸೆಂಬರ್​ಲ್ಲಿ ಮೊದಲ ಉತ್ಪಾದನಾ ಘಟಕವನ್ನು ಮತ್ತು 2010 ರಲ್ಲಿ ಎರಡನೇ ಘಟಕವನ್ನು ಸ್ಥಾಪಿಸಿತ್ತು. ಪ್ರಸ್ತುತ, ಇದು ಎರಡು ಘಟಕಗಳಲ್ಲಿ ವಾರ್ಷಿಕವಾಗಿ 3,42,000 ಕಾರುಗಳನ್ನು ಉತ್ಪಾದಿಸುತ್ತದೆ ಮತ್ತು 11,500 ಜನರನ್ನು ಉದ್ಯೋಗಕ್ಕೆ ನೇಮಿಸಿಕೊಂಡಿದೆ. ದೇಶಾದ್ಯಂತ 617 ಡೀಲರ್‌ಗಳ ಮೂಲಕ ಕಾರುಗಳ ಮಾರಾಟ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ