ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿಯಿದ್ದು, ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2024 | 8:51 PM

ಹಾಸನ, ಆಗಸ್ಟ್​ 05: ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ಮಧ್ಯೆ ರೈಲುಗಳ ಸಂಚಾರ ರದ್ದಾಗಿತ್ತು. ಇದೀಗ ರೈಲು ಹಳಿ (Track) ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಜುಲೈ 26ರಿಂದ ಬೆಂಗಳೂರು-ಮಂಗಳೂರು ಮಾರ್ಗ ಬಂದ್ ಆಗಿತ್ತು. ಕಿ.ಮೀ ನಂ.63ರಲ್ಲಿ ರೈಲ್ವೆ ಹಳಿ ಮೇಲೆ‌ ಗುಡ್ಡ ಕುಸಿದಿತ್ತು. 11 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಇಲಾಖೆ ಕಾರ್ಮಿಕರು ಇಂದು ಹಳಿ ಮರುಸ್ಥಾಪಿಸಿದ್ದಾರೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ರೈಲು ಸಂಚಾರ ಯಾವಾಗ ಪುನರಾರಂಭ? ಹಳಿ ದುರಸ್ತಿ ಕಾರ್ಯದ ಅಪ್​ಡೇಟ್ ಇಲ್ಲಿದೆ

ಸುಮಾರು 420ಕ್ಕೂ ಹೆಚ್ಚು ಕಾರ್ಮಿಕರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಅಪಾಯವಿಲ್ಲದೆ ಮರುಸ್ಥಾಪನೆ ಮಾಡಿದ ರೈಲ್ವೆ ಹಳಿ ಮೇಲೆ ಗೂಡ್ಸ್ ರೈಲು ಪ್ರಾಯೋಗಿಕವಾಗಿ ಸಂಚರ ಮಾಡಲಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಶನಿವಾರ ಮುಕ್ತಾಯಗೊಂಡಿದೆ. ರೈಲು ಮಾರ್ಗ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಗೋಡೆಯ ನಿರ್ಮಾಣದಲ್ಲಿ ಕಬ್ಬಿಣವನ್ನು ಬಳಸಲಾಗುತ್ತದೆ. ಪ್ರಸ್ತುತ ಹೆಚ್ಚುವರಿ ಹಂತದ ಬಂಡೆಗಳನ್ನು ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: ಮಂಗಳೂರು: ಕೆತ್ತಿಕಲ್ ಗುಡ್ಡದ ಮೇಲಿವೆ 200ಕ್ಕೂ ಹೆಚ್ಚು ಮನೆ, ವಯನಾಡು ರೀತಿಯ ದುರಂತದ ಭೀತಿ

ದುರಸ್ತಿ ಸ್ಥಳದಲ್ಲಿ ಪ್ರಸ್ತುತ ಗಂಟೆಗೆ 15 ಕಿ. ಮೀ. ವೇಗದ ಮಿತಿಯನ್ನು ಜಾರಿಗೊಳಿಸಲಾಗಿದೆಯಾದರೂ ಇದನ್ನು ರೈಲ್ವೆ ಇಲಾಖೆಯು ಅಧಿಕೃತವಾಗಿ ದೃಢೀಕರಿಸಿಲ್ಲ. ಶೀಘ್ರದಲ್ಲೇ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ರೈಲ್ವೆ ಇಲಾಖೆಗಳು ಮೂಲಗಳು ತಿಳಿಸಿವೆ.

14 ರೈಲುಗಳ ಸಂಚಾರ ರದ್ದು

ನಿರಂತರ ಸುರಿದ ಮಳೆಯಿಂದಾಗಿ ಯಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತ ಸಂಭವಿಸಿ ರೈಲು ಹಳಿಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜುಲೈ 26ರಿಂದ ಸುಮಾರು 14 ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ