ಬ್ರಿಟನ್ನಿಂದ ಬೀದರ್ಗೆ ಆಗಮಿಸಿದ ವ್ಯಕ್ತಿಯ ಸಂಪರ್ಕಿತರ ಆರೋಗ್ಯದ ಮೇಲೆ ತೀವ್ರ ನಿಗಾ..
ವ್ಯಕ್ತಿಯ ಪ್ರಥಮ 8 ಜನ ಸಂಪರ್ಕಿತರು ಮತ್ತು ದ್ವಿತೀಯ 10 ಜನ ಸಂಪರ್ಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ. ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿದ್ದು, ನಿಯಮಗಳ ಪಾಲನೆ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ.
ಬೀದರ್: ಬ್ರಿಟನ್ನಿಂದ ನಗರಕ್ಕೆ ಆಗಮಿಸಿದ ವ್ಯಕ್ತಿಯ ಸಂಪರ್ಕಕ್ಕೆ ಬಂದ ಅವರ ಒಂದು ವರ್ಷದ ಪುತ್ರಿ ಸೇರಿದಂತೆ ಎಲ್ಲರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.
ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 8 ಮತ್ತು ದ್ವಿತೀಯ ಸಂಪರ್ಕದ 10 ಮಂದಿಯಲ್ಲಿ ರೋಗದ ಯಾವುದೇ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ. ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕ್ವಾರಂಟೈನ್ನಲ್ಲಿದ್ದು, ನಿಯಮಗಳ ಪಾಲನೆ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ. ಎಲ್ಲರನ್ನೂ ಪದೇಪದೇ ಭೇಟಿ ಮಾಡಿ ಆರೋಗ್ಯದ ಬಗ್ಗೆ ಮೇಲ್ವಿಚಾರಣೆ ಮಾಡಲು ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕ್ರಮ ವಹಿಸಿದ್ದಾರೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ಮಾಹಿತಿ ಬ್ರಿಟನ್ನಿಂದ ಭಾರತಕ್ಕೆ ಡಿಸೆಂಬರ್ 11ರಂದು ಮರಳಿದ ವ್ಯಕ್ತಿ ಕಲಬುರಗಿಯಲ್ಲಿ ಉಳಿದುಕೊಂಡಿದ್ದರು. ಬಳಿಕ ಕಲಬುರಗಿಯಿಂದ ಡಿಸೆಂಬರ್ 21ರಂದು ಸೋಮವಾರ ಬೀದರ್ನ ಶಿವನಗರಕ್ಕೆ ಬಂದಿದ್ದಾರೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಬೀದರ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಡಿಸೆಂಬರ್ 22 ರಂದು ಮಾಹಿತಿ ನೀಡಿದ್ದರು.
ನೆಗೆಟಿವ್ ವರದಿ ಈ ಮಾಹಿತಿ ತಿಳಿಯುತ್ತಿದ್ದಂತೆ ಯಾತ್ರಾರ್ಥಿಯ ಪ್ರಾಥಮಿಕ ಹಾಗೂ ದ್ವೀತೀಯ ಸಂಪರ್ಕಿತರನ್ನು ಮೊಬೈಲ್ ಮೂಲಕ ಸಂಪರ್ಕಿಸಿ, ಡಿಸೆಂಬರ್ 23 ರ ಬೆಳಗ್ಗೆ 10 ಗಂಟೆ ಹೊತ್ತಿಗೆ ಎಲ್ಲರ ಗಂಟಲು ದ್ರವವನ್ನು ಸಂಗ್ರಹಿಸಿ ಬೀದರ್ನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಥಮ 8 ಜನ ಸಂಪರ್ಕಿತರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ವರದಿಗಳು ನೆಗಟಿವ್ ಇದೆ ಎಂದು ಟಿವಿ9 ಗೆ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.