ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ

| Updated By: Skanda

Updated on: Mar 17, 2021 | 6:54 PM

ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ
ಮೇವು ಬೆಂಕಿಗೆ ಆಹುತಿ ಆಗಿರುವ ದೃಶ್ಯ
Follow us on

ಬಾಗಲಕೋಟೆ: ವಿದ್ಯುತ್​ ತಂತಿ ತಗುಲಿ ಟ್ರ್ಯಾಕ್ಟರ್​ಗೆ ಬೆಂಕಿ ಹತ್ತಿಕೊಂಡು ಮೇವು ಸುಟ್ಟು ಭಸ್ಮವಾದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ನಡೆದಿದೆ. ಟ್ರಾಕ್ಟರ್​ನಲ್ಲಿ ಇದ್ದ 25 ಸಾವಿರ ರೂಪಾಯಿ ಮೌಲ್ಯದ ಮೇವು ಬೆಂಕಿಗೆ ಆಹುತಿಯಾಗಿದ್ದು, ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ಚಲಿಸುತ್ತಿದ್ದ ಲಾರಿ ಟೈಯರ್​ಗೆ ಬೆಂಕಿ:
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಚಲಿಸುತ್ತಿದ್ದ ಸಿಮೇಂಟ್ ಲಾರಿ ಟೈರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಲಾರಿ ಹಿಂಬದಿಯ ಆರು ಟೈರ್​ಗಳಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಲಾರಿಗೂ ಕೂಡ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿನ ಕಲ್ಲಡ್ಕ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕುಪ್ಪಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಬಿದ್ದಿದ್ದನ್ನು ಗಮನಿಸಿ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ ಚಾಲಕ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಚಲಿಸುತ್ತಿದ್ದ ಲಾರಿಯ ಟೈರ್​ನ ಲೈನರ್ ಗಳಲ್ಲಿ ಉಷ್ಣಾಂಶ ಹೆಚ್ಚಾದ ಕಾರಣ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದೆ.

ಸಿಮೆಂಟ್​ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ದೃಶ್ಯ

ಇದನ್ನೂ ಓದಿ:

ಆಹುತಿ: ಆಕಸ್ಮಿಕ ಬೆಂಕಿಗೆ ಬಾಳೆ ತೋಟ ಭಸ್ಮ; 90 ಟನ್ ಇಳುವರಿ ನಷ್ಟ ಅನುಭವಿಸಿದ ಕೋಲಾರ ರೈತ

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ