ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..

| Updated By: ರಮೇಶ್ ಬಿ. ಜವಳಗೇರಾ

Updated on: Aug 25, 2023 | 8:09 AM

ಚಂದ್ರಯಾನ-3 ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರು ನಗರದ ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲ ಮಾರ್ಗ ಸಂಚಾರ ಬದಲಾವಣೆ ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ವಾಹನ ಸವಾರರ ಗಮನಕ್ಕೆ: ಆ.26ರಂದು ಬೆಂಗಳೂರಿಗೆ ನರೇಂದ್ರ ಮೋದಿ, ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ, ಎಲ್ಲೆಲ್ಲಿ ನೋಡಿ..
ಪ್ರಧಾನಿ ನರೇಂದ್ರ ಮೋದಿ
Follow us on

ಬೆಂಗಳೂರು, (ಆಗಸ್ಟ್ 25): ಇಸ್ರೋದ (ISRO) ಐತಿಹಾಸಿಕ ಚಂದ್ರಯಾನ-3 (Chandrayaan 3) ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಶನಿವಾರ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಸದ್ಯ ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ಶನಿವಾರ ಬೆಳಗ್ಗೆ ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹೀಗಾಗಿ ನಾಳೆ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ

ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಬೆಂಗಳೂರು ಸಂಚಾರಿ ಪೋಲಿಸರು ಮನವಿ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲ ರಸ್ತೆ ಮಾರ್ಗ ಬದಲಾವಣೆ ಎಲ್ಲೆಲ್ಲಿ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಬೆಂಗಳೂರಿಗೆ ಶನಿವಾರ ಪ್ರಧಾನಿ ಮೋದಿ ಭೇಟಿ: ಸಾರ್ವಜನಿಕರು, ಕಾರ್ಯಕರ್ತರನ್ನು ಆಹ್ವಾನಿಸಿದ ಬಿಜೆಪಿ ನಾಯಕ ಆರ್​ ಅಶೋಕ್

  • ಓಲ್ಡ್ ಏರ್ಪೋರ್ಟ್ ರಸ್ತೆ
  • ಓಲ್ಡ್‌ ಮದ್ರಾಸ್ ರಸ್ತೆ
  • ಎಂ.ಜಿ.ರಸ್ತೆ
  • ಕಬ್ಬನ್ ರಸ್ತೆ
  • ರಾಜಭವನ ರಸ್ತೆ
  • ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್)
  • ಸಿವಿ ರಾಮನ್ ರಸ್ತೆ
  • ಯಶವಂತಪುರ ಫ್ಲೈ ಓವರ್
  • ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ)
  • ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ)
  • ಗುಬ್ಬಿ ತೋಟದಪ್ಪ ರಸ್ತೆ
  • ಜಾಲಹಳ್ಳಿ ಕ್ರಾಸ್‌ ರಸ್ತೆ
  • ಇನ್ನು ಆಗಸ್ಟ್ 26ರ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನ (Heavy Goods Vehicles) ಸಂಚಾರ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೋದಿ ವೇಳಾಪಟ್ಟಿ ಇಂತಿದೆ

  • ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೋದಿ
  • ನಾಳೆ ಬೆಳಗ್ಗೆ (ಆಗಸ್ಟ್ 26) 5.55ಕ್ಕೆ HAL ಏರ್‌ಪೋರ್ಟ್‌ಗೆ ಮೋದಿ ಆಗಮನ
  • ಬೆಳಗ್ಗೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ
  • ಬೆಳಗ್ಗೆ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ
  • ಬೆಳಗ್ಗೆ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ
  • ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮನ

ಮೋದಿ ರೋಡ್​ ಶೋ ನಡೆಸುವ ಸಾಧ್ಯತೆ

ಈ ಮಧ್ಯೆ, ಮೋದಿ ಅವರ ಬೆಂಗಳೂರು ಭೇಟಿಯನ್ನು ಪಕ್ಷದ ದೃಷ್ಟಿಯಿಂದ ಪೂರಕವಾಗಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಪ್ರಧಾನಿ ಭೇಟಿ ವೇಳೆ ಹೆಚ್ಚಿನ ಜನ ಸೇರಿಸುವುದು ಮತ್ತು ಪೀಣ್ಯದಲ್ಲಿ ರೋಡ್ ಶೋ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ. ಈ ವಿಚಾರವಾಗಿ ರಾಜ್ಯ ಘಟಕದ ನಾಯಕರಿಗೆ ವರಿಷ್ಠರಿಂದ ಈಗಾಗಲೇ ಸೂಚನೆ ಬಂದಿದೆ. ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್​ಎಎಲ್​​ ಏರ್​ಪೋರ್ಟ್​ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್​ಪೋರ್ಟ್​ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯೂ ಇದೆ.

ಪೀಣ್ಯದಲ್ಲಿ ಮೋದಿ ಅವರು ಸುಮಾರು 1 ಕಿಲೋಮೀಟರ್ ರೋಡ್​ಶೋ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಬಿಜೆಪಿ ಶಾಸಕರಿಗೆ ಕೂಡ ಸೂಚನೆ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:08 am, Fri, 25 August 23