ಸಿಲಿಕಾನ್ ಸಿಟಿಗೆ ಅಮಿತ್ ಶಾ ಆಗಮನ: ನಗರದ ಕೆಲವೆಡೆ ವಾಹನ ಸಂಚಾರ ನಿರ್ಬಂಧ
ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಕೆಲವೆಡೆ ಟ್ರಾಫಿಕ್ ನಿರ್ಬಂಧ ಹೇರಲಾಗಿದೆ.
ಬೆಂಗಳೂರು: ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಕೆಲವೆಡೆ ಟ್ರಾಫಿಕ್ ನಿರ್ಬಂಧ ಹೇರಲಾಗಿದೆ.
ವಿಧಾನ ಸೌಧದ ಎದುರು ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದ್ದು ಮಧ್ಯಾಹ್ನ 3ರಿಂದ ರಾತ್ರಿ 8ರವರೆಗೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.
K.Rಸರ್ಕಲ್ನಿಂದ ಬಾಳೆಕುಂದ್ರಿ ವೃತ್ತದವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಇದಕ್ಕೆ ಪರ್ಯಾಯ ಮಾರ್ಗವಾಗಿ ವಾಹನ ಸವಾರರಿಗೆ ಕ್ವೀನ್ಸ್ ರಸ್ತೆ, ಕಸ್ತೂರ್ ಬಾ ರಸ್ತೆ, ನೃಪತುಂಗ ರಸ್ತೆ ಮತ್ತು ಹಡ್ಸನ್ ವೃತ್ತದ ಮಾರ್ಗ ಬಳಸುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಕರ್ನಾಟಕ ಪ್ರವಾಸ: ಜನವರಿ 16, 17ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಗೃಹ ಸಚಿವ