AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ವೇಗದ ಎಲೆಕ್ಟ್ರಿಕ್ ವಾಹನಗಳಿಗೂ ಟ್ರಾಫಿಕ್ ರೂಲ್ಸ್; ಕಾರ್ ಪೂಲಿಂಗ್‌ಗೆ ಹೊಸ ನೀತಿ ಜಾರಿಗೆ ಸರ್ಕಾರ ಪ್ಲ್ಯಾನ್!

ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಇನ್ನೊಂದೆಡೆ ಕಡಿಮೆ ವೇಗದ ಬ್ಯಾಟರಿ ಚಾಲಿತ ವಾಹನಗಳಿಗೂ ಅಗತ್ಯ ನಿಯಮ ತರಲು ಮುಂದಾಗಿದೆ. ಜೊತೆಗೆ ಕಾರ್ ಪೂಲಿಂಗ್ ಮತ್ತು ಪ್ರಯಾಣ ಹಂಚಿಕೆ ವ್ಯವಸ್ಥೆಗೆ ಹೊಸ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಾಗಿ ಸಚಿವ ಭೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಕಡಿಮೆ ವೇಗದ ಎಲೆಕ್ಟ್ರಿಕ್ ವಾಹನಗಳಿಗೂ ಟ್ರಾಫಿಕ್ ರೂಲ್ಸ್; ಕಾರ್ ಪೂಲಿಂಗ್‌ಗೆ ಹೊಸ ನೀತಿ ಜಾರಿಗೆ ಸರ್ಕಾರ ಪ್ಲ್ಯಾನ್!
ಪ್ರಾತಿನಿಧಿಕ ಚಿತ್ರ Image Credit source: Getty images
ಪ್ರಸನ್ನ ಗಾಂವ್ಕರ್​
| Edited By: |

Updated on:Sep 30, 2026 | 10:35 PM

Share

ಮುಖ್ಯಾಂಶಗಳು

  • ಕಡಿಮೆ ವೇಗದ ಎಲೆಕ್ಟ್ರಿಕ್​ ವಾಹನಗಳಿಗೂ ರೂಲ್ಸ್​
  • ಕಾರ್ ಪೂಲಿಂಗ್, ಪ್ರಯಾಣ ಹಂಚಿಕೆ ವ್ಯವಸ್ಥೆಗೆ ಹೊಸ ನೀತಿ
  • ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿಕೆ

ಬೆಂಗಳೂರು, ಸೆಪ್ಟೆಂಬರ್​ 30: ರಾಜ್ಯದಲ್ಲಿ ಸಂಚಾರ ಶಿಸ್ತು ಕಾಪಾಡುವ ಜತೆಗೆ ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಸಾರಿಗೆ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಕಡಿಮೆ ವೇಗದ ಬ್ಯಾಟರಿ ಚಾಲಿತ ವಿದ್ಯುತ್ (ಇವಿ) ದ್ವಿಚಕ್ರ ವಾಹನಗಳಿಗೂ ಸಂಚಾರಿ ನಿಯಮಗಳನ್ನು ಅನ್ವಯಿಸಲು ಹಾಗೂ ನಗರಗಳಲ್ಲಿ ವಾಹನ ದಟ್ಟಣೆ ತಗ್ಗಿಸಲು ಆ್ಯಪ್ ಆಧಾರಿತ ಕಾರ್ ಪೂಲಿಂಗ್ ಸೇವೆಗಳಿಗೆ ನೂತನ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಕಡಿಮೆ ವೇಗದ ಇವಿ ಬೈಕ್‌ಗಳಿಗೂ ನಿಯಮ ಅನ್ವಯಿಸಲು ಪ್ಲ್ಯಾನ್

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ‘ಕಡಿಮೆ ವೇಗದ ಬ್ಯಾಟರಿ ಚಾಲಿತ ವಿದ್ಯುತ್‌ ದ್ವಿಚಕ್ರ ವಾಹನಗಳಿಗೆ ಪ್ರಸ್ತುತ ಹೆಲ್ಮೆಟ್‌ ಧರಿಸುವಿಕೆ ಹಾಗೂ ನೋಂದಣಿ ಸೇರಿದಂತೆ ಕೆಲವು ಸಂಚಾರಿ ನಿಯಮಗಳು ಅನ್ವಯಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ, ಇಂತಹ ವಾಹನಗಳ ಮೂಲಕ ಸಂಚಾರಿ ನಿಯಮ ಉಲ್ಲಂಘನೆಗಳು ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ’ ಎಂದರು.

ಇದನ್ನೂ ಓದಿ: ಫುಟ್‌ಪಾತ್ ಬೈಕ್ ಸವಾರರಿಗೆ ಭಾರಿ ದಂಡದ ಶಾಕ್: ಹಾಫ್ ಹೆಲ್ಮೆಟ್ ನಿಷೇಧಕ್ಕೆ ಸರ್ಕಾರ ಚಿಂತನೆ

‘ರಸ್ತೆ ಸುರಕ್ಷತೆ ಹಾಗೂ ಸಂಚಾರ ಶಿಸ್ತು ಕಾಪಾಡುವ ನಿಟ್ಟಿನಲ್ಲಿ, ಇಂತಹ ವಾಹನಗಳನ್ನು ಗುರುತಿಸುವುದು ಮತ್ತು ಚಾಲಕರ ಹೊಣೆಗಾರಿಕೆಯನ್ನು ಖಚಿತಪಡಿಸುವುದು ಸೇರಿದಂತೆ ಅಗತ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಕಾರ್ ಪೂಲಿಂಗ್ ಮತ್ತು ಪ್ರಯಾಣ ಹಂಚಿಕೆಗೆ ರಾಜ್ಯಮಟ್ಟದ ಹೊಸ ನೀತಿ

ನಗರ ಪ್ರದೇಶಗಳಲ್ಲಿ ನಿತ್ಯ ಎದುರಾಗುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕಾರ್ ಪೂಲಿಂಗ್ ಮತ್ತು ಪ್ರಯಾಣ ಹಂಚಿಕೆ ವ್ಯವಸ್ಥೆಗೆ ರಾಜ್ಯಮಟ್ಟದಲ್ಲಿ ಸೂಕ್ತ ನೀತಿ ರೂಪಿಸುವ ಕುರಿತು ಚರ್ಚೆ ನಡೆದಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

LIVE TV

ಮೊಬೈಲ್ ಅಪ್ಲಿಕೇಶನ್ ಆಧಾರಿತ ಕಾರ್ ಪೂಲಿಂಗ್ ಸೇವೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ರಾಜ್ಯಮಟ್ಟದಲ್ಲಿ ಸೂಕ್ತ ಹಾಗೂ ಸಮಗ್ರ ನೀತಿ ರೂಪಿಸುವ ಕುರಿತು ಇಲಾಖಾ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.

‘ಪಾರ್ಕ್ ಆ್ಯಂಡ್ ರೈಡ್’ ಕೇಂದ್ರಗಳ ಅಭಿವೃದ್ಧಿಗೆ ಚಿಂತನೆ

ಇನ್ನು ಸಾರ್ವಜನಿಕರು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಸಾರಿಗೆ ವ್ಯವಸ್ಥೆಯನ್ನು ಸುಲಭವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ‘ಪಾರ್ಕ್ ಆ್ಯಂಡ್‌ ರೈಡ್‌’ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಬಗ್ಗೆಯೂ ಸಾರಿಗೆ ಇಲಾಖೆಯ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:26 pm, Wed, 30 September 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ