AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಪ್ರಕರಣ: ಯುವಕ ಸೇರಿ ನೀರಲ್ಲಿ ಮುಳುಗಿ ಮೂವರ ದಾರುಣ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರ ಮತ್ತು ಉತ್ತರ ಕನ್ನಡದ ಶಿರಸಿಯಲ್ಲಿ ಸಂಭವಿಸಿದ ಪ್ರತ್ಯೇಕ ನೀರಿನ ದುರಂತಗಳಲ್ಲಿ ಜಾನುವಾರು ತೊಳೆಯಲು ಹೋದ ಇಬ್ಬರು ಹಾಗೂ ಈಜಲು ತೆರಳಿದ್ದ 17 ವರ್ಷದ ಯುವಕ ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಪ್ರತ್ಯೇಕ ಪ್ರಕರಣ: ಯುವಕ ಸೇರಿ ನೀರಲ್ಲಿ ಮುಳುಗಿ ಮೂವರ ದಾರುಣ ಸಾವು
ಯುವಕ ಸೇರಿ ನೀರಲ್ಲಿ ಮುಳುಗಿ ಮೂವರ ದಾರುಣ ಸಾವು Image Credit source: Tv9 Kannada
ಮಂಜುನಾಥ ಕೆಬಿ
| Edited By: |

Updated on: Sep 15, 2026 | 6:48 PM

Share

ಹಾಸನ/ಕಾರವಾರ, ಸೆಪ್ಟೆಂಬರ್​​ 15: ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಭವಿಸಿದ ದುರಂತದಲ್ಲಿ ನೀರಲ್ಲಿ ಮುಳುಗಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಜಾನುವಾರು ಮೈತೊಳೆಯಲು ಹೋದವರು ನೀರುಪಾಲಾಗಿದ್ದರೆ, ಇತ್ತ ಶಿರಸಿಯಲ್ಲಿ ಗೆಳೆಯರ ಜೊತೆ ಈಜಲು ತೆರಳಿದ್ದ 17 ವರ್ಷದ ಯುವಕ ದುರಂತ ಅಂತ್ಯ ಕಂಡಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಜಾನುವಾರು ಮೈತೊಳೆಯಲು ಹೋಗಿದ್ದವರು ಕೆರೆಪಾಲು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಂಡಿಶೆಟ್ಟಿಹಳ್ಳಿಯಲ್ಲಿ ಜಾನುವಾರು ಮೈತೊಳೆಯಲು ಹೋಗಿದ್ದ ಇಬ್ಬರು ಕೆರೆಪಾಲಾಗಿದ್ದಾರೆ. ಕೆಂಗೇಗೌಡ(60) ಮತ್ತು ಕುಮಾರ(30) ಮೃತರಾಗಿದ್ದು, ಕೆರೆಯಲ್ಲಿ ಮುಳುಗುತ್ತಿದ್ದ ಕೆಂಗೇಗೌಡ ರಕ್ಷಣೆಗೆ ಕುಮಾರ ತೆರಳಿದ್ದರು. ಆದರೆ ಕೆರೆಯಿಂದ ಹೊರಬರಲಾಗದೆ ಇಬ್ಬರೂ ಮೃಪಟ್ಟಿದ್ದಾರೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಇವರಿಬ್ಬರೂ ಕೆರೆ ಬಳಿ ತೆರಳಿದ್ದರು ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಶವಗಳಿಗಾಗಿ ಶೋಧ ಕಾರ್ಯ ನಡೆದಿದ್ದು, ಹೊಳೆನರಸೀಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LIVE TV

ಇದನ್ನೂ ಓದಿ: ಗಣೇಶ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ: ಕರ್ನಾಟಕದ ವಿವಿಧೆಡೆ ಪ್ರತ್ಯೇಕ ಅವಘಡಗಳಲ್ಲಿ 12 ಮಂದಿ ಸಾವು

15 ಅಡಿ ಆಳದಲ್ಲಿದ್ದ ಮೃತದೇಹ ಹೊರಕ್ಕೆ

ಶಿರಸಿ ತಾಲೂಕಿನ ಬನವಾಸಿಯ ಸುಗಾವಿ ಗ್ರಾಮದಲ್ಲಿ ಭಟ್ರಕೆರೆಗೆ ಈಜಲು ಹೋಗಿದ್ದ ಮೂವರ ಪೈಕಿ ಓರ್ವ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸುನೀಲ ಅಲಿಯಾಸ್ ಸುಜಯ್ ಕೃಷ್ಣ ಚೆನ್ನಯ್ಯ (17) ಮೃತ ದುರ್ದೈವಿ. ಕೆರೆಯ ಮಧ್ಯದಲ್ಲಿ ಮುಳುಗಿ ಸುಜಯ್ ಕೃಷ್ಣ ಪ್ರಾಣಬಿಟ್ಟಿದ್ದು, ಶವಕ್ಕಾಗಿ ಶೋಧ ನಡೆಸಿ ಮಾರಿಕಾಂಬಾ ಲೈಫ್​​ ಗಾರ್ಡ್ ತಂಡ 15 ಅಡಿ ಆಳದಲ್ಲಿದ್ದ ಮೃತದೇಹ ಹೊರಕ್ಕೆ ತೆಗೆದಿದೆ. ಸ್ಥಳಕ್ಕೆ ಬನವಾಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!