AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರು ಸಾವು; ಇಂಜಿನಿಯರಿಂಗ್​ ವಿದ್ಯಾರ್ಥಿ ತುಂಗಾ ನದಿ ಪಾಲು

ಶಿವಮೊಗ್ಗದ ಸಾಗರ ತಾಲೂಕಿನ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ನಡೆದಿದೆ. ಮತ್ತೊಂದು ದುರಂತದಲ್ಲಿ, ಚಿಕ್ಕಮಗಳೂರು ಶೃಂಗೇರಿ ತುಂಗಾ ನದಿಯಲ್ಲಿ ಕೋಲಾರದ ಇಂಜಿನಿಯರಿಂಗ್ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಯಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಪ್ರತ್ಯೇಕ ಘಟನೆ: ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರು ಸಾವು; ಇಂಜಿನಿಯರಿಂಗ್​ ವಿದ್ಯಾರ್ಥಿ ತುಂಗಾ ನದಿ ಪಾಲು
ಪ್ರಾತಿನಿಧಿಕ ಚಿತ್ರImage Credit source: Getty images
Basavaraj Yaraganavi
| Edited By: |

Updated on: Oct 11, 2026 | 9:43 PM

Share

ಮುಖ್ಯಾಂಶಗಳು

  • ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
  • ತುಂಗಾ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು
  • ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಶಿವಮೊಗ್ಗ, ಅಕ್ಟೋಬರ್​ 11: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ​ಆಲಳ್ಳಿ ಬಳಿಯ ಹೊಸಕೆರೆಯಲ್ಲಿ ನಡೆದಿದೆ. ಒಂದೇ ಕುಟುಂಬಕ್ಕೆ ಸೇರಿದ ಲೇಖನ್‌(13) ಮತ್ತು ಪುನೀತ್‌(11) ಮೃತರು. ಎಳೆಯ ವಯಸ್ಸಿನ ಮಕ್ಕಳನ್ನು ಕಳೆದುಕೊಂಡ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಸಾಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕರ ಸಾವಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

ಘಟನೆಯಿಂದಾಗಿ ಸ್ಥಳೀಯರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆಘಾತ ಮೂಡಿದ್ದು, ಮೃತ ಬಾಲಕರಿಗಾಗಿ ಕಂಬನಿ ಮಿಡಿದಿದ್ದಾರೆ.​ ಬಾಲಕರ ಅಕಾಲಿಕ ಸಾವಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕೂಡ ತೀವ್ರ ಸಂತಾಪ ಸೂಚಿಸಿದ್ದಾರೆ. ಇನ್ನು ​ಘಟನೆಗೆ ಸಂಬಂಧಿಸಿದಂತೆ ಸಾಗರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.

ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು

ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ರಾಘವೇಂದ್ರ ಪೂಜಾರಿ(20) ಮೃತ ವಿದ್ಯಾರ್ಥಿ. ಪೋಷಕರ ಜೊತೆ ಶೃಂಗೇರಿಗೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ. ನದಿ ಬಳಿ ನಾಮಫಲಕ ಅಳವಡಿಸುವಂತೆ ಜನರು ಆಗ್ರಹಿಸಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LIVE TV

ನಡೆದಿದ್ದೇನು?

ಕೋಲಾರ ಜಿಲ್ಲೆಯ ಮಾಲೂರು ಮೂಲದ ರಾಘವೇಂದ್ರ ಪೂಜಾರಿ ಎಂಜಿನಿಯರಿಂಗ್ ಓದುತ್ತಿದ್ದ. ಇಂದು ಪೋಷಕರ ಜೊತೆ ಶೃಂಗೇರಿಗೆ ಬಂದಿದ್ದ ವೇಳೆ ದುರಂತ ನಡೆದಿದೆ. ರಾಘವೇಂದ್ರ ನದಿಯಲ್ಲಿ ಮುಳುಗುತ್ತಿರುವುದನ್ನು ಓರ್ವ ಮಹಿಳೆ ನೋಡಿದ್ದು, ರಕ್ಷಣೆ ಮಾಡುವಷ್ಟರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ತುಂಗಾ ನದಿಯಲ್ಲಿ ರಾಘವೇಂದ್ರ ಮೃತಪಟ್ಟ ಜಾಗದ ಬಳಿ ಈಗಾಗಲೇ ಹಲವರು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ನದಿ ಬಳಿ ನಾಮಫಲಕ ಅಳವಡಿಸುವಂತೆ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದುರ್ಗಾ ಮಾತೆ ಕೊಂಡೊಯ್ಯುತ್ತಿದ್ದ ವೇಳೆಯೇ ಅವಘಡ: ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 7 ಜನ ಗಂಭೀರ

ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಮೃತ ದೇಹಕ್ಕಾಗಿ ಶೋಧ ನಡೆಸಿದ್ದಾರೆ. ನದಿಯ ಆಳದಲ್ಲಿ ಶವ ಹುಡುಕಲು ಮಲ್ಪೆ ಈಶ್ವರ್ ತಂಡ ಕೂಡ ಆಗಮಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Yaraganavi
Basavaraj Yaraganavi
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್