ಪ್ರಯಾಣಿಕರ ಗಮನಕ್ಕೆ: ರಾಜ್ಯದ 8 ರೈಲುಗಳ ಸಂಚಾರ 1 ವಾರ ರದ್ದು
ಬೆಂಗಳೂರಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.

ಬೆಂಗಳೂರು, ಅಕ್ಟೋಬರ್ 15: ಬೆಂಗಳೂರು (Bengaluru) ನಗರದಿಂದ ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ತಾಲ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಯಲ್ಲಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.
ಇದನ್ನೂ ಓದಿ: ನಾಗಸಂದ್ರ-ಮಾದಾವರ ಮೆಟ್ರೋ ಮಾರ್ಗ ಉದ್ಘಾಟನಾ ದಿನಾಂಕ ನಿಗದಿಗೆ ಸರ್ಕಾರಕ್ಕೆ ಪತ್ರ ಬರೆದ BMRCL
ರೈಲು ರದ್ದು
- ರೈಲು ಸಂಖ್ಯೆ: 07346 ತುಮಕೂರು-ಚಾಮರಾಜನಗರ ಪ್ಯಾಸೆಂಜರ್
- ರೈಲು ಸಂಖ್ಯೆ: 07328 ಚಾಮರಾಜನಗರ-ಮೈಸೂರು ಪ್ಯಾಸೆಂಜರ್
- ರೈಲು ಸಂಖ್ಯೆ: 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್
- ರೈಲು ಸಂಖ್ಯೆ: 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್
- ರೈಲು ಸಂಖ್ಯೆ: 06576 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು
- ರೈಲು ಸಂಖ್ಯೆ: 06575 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು
- ರೈಲು ಸಂಖ್ಯೆ: 16579 ಯಶವಂತಪುರ-ಶಿವಮೊಗ್ಗ ಟೌನ್
- ರೈಲು ಸಂಖ್ಯೆ: 16580 ಶಿವಮೊಗ್ಗ ಟೌನ್-ಯಶವಂತಪುರ ರೈಲು ಸಂಚಾರ ಒಂದು ವಾರ ರದ್ದಾಗಲಿದೆ
ಭಾಗಶಃ ರದ್ದು
- ರೈಲು ಸಂಖ್ಯೆ: 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ರೈಲು ಹಿರೇಹಳ್ಳಿ-ತುಮಕೂರು ರೈಲು ನಿಲ್ದಾಣದ ನಡುವೆ ಸಂಚರಿಸುವುದಿಲ್ಲ.
- ರೈಲು ಸಂಖ್ಯೆ: 06572 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ರೈಲು ತುಮಕೂರು-ಹಿರೇಹಳ್ಳಿ ಮಧ್ಯೆ ಸಂಚರಿಸುವುದಿಲ್ಲ.
- ರೈಲು ಸಂಖ್ಯೆ: 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್ಆರ್ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
- ರೈಲು ಸಂಖ್ಯೆ: 12725 ಕೆಎಸ್ಆರ್ ಬೆಂಗಳೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್ಆರ್ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
- ರೈಲು ಸಂಖ್ಯೆ: 12726 ಧಾರವಾಡ-ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸಿಕೆರೆ-ಕೆಎಸ್ಆರ್ ಬೆಂಗಳೂರು ಮಧ್ಯೆ ಸಂಚರಿಸುವುದಿಲ್ಲ.
ರೈಲುಗಳ ಮಾರ್ಗ ಬದಲಾವಣೆ
- ರೈಲು ಸಂಖ್ಯೆ: 17310 ವಾಸ್ಕೋ ಡ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸುತ್ತದೆ.
- ರೈಲು ಸಂಖ್ಯೆ: 22687 ಮೈಸೂರು-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
- ರೈಲು ಸಂಖ್ಯೆ: 82653 ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ.
- ರೈಲು ಸಂಖ್ಯೆ: 19668 ಮೈಸೂರು-ಉದಯಪುರ ಸಿಟಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತದೆ.
- ರೈಲು ಸಂಖ್ಯೆ: 17326 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ ಮಾರ್ಗವಾಗಿ ಸಂಚರಿಸುತ್ತದೆ.
ರೈಲು ನಿಯಂತ್ರಣ
- ರೈಲು ಸಂಖ್ಯೆ: 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲನ್ನು 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- ರೈಲು ಸಂಖ್ಯೆ: 17325 ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ರೈಲನ್ನು 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- ರೈಲು ಸಂಖ್ಯೆ: 07345 ಚಾಮರಾಜನಗರ-ತುಮಕೂರು ಪ್ಯಾಸೆಂಜರ್ ರೈಲನ್ನು 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- ರೈಲು ಸಂಖ್ಯೆ: 17309 ಯಶವಂತಪುರ – ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲನ್ನು 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- ರೈಲು ಸಂಖ್ಯೆ: 06513 ತುಮಕೂರು-ಶಿವಮೊಗ್ಗ ಟೌನ್ ರೈಲನ್ನು 85 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ