TV9 Kannada Karnataka Train Cancel: 8 trains canceled for 1 week which are depart from KSR Bengaluru, Kannada News
ಪ್ರಯಾಣಿಕರ ಗಮನಕ್ಕೆ: ರಾಜ್ಯದ 8 ರೈಲುಗಳ ಸಂಚಾರ 1 ವಾರ ರದ್ದು
ಬೆಂಗಳೂರಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.
ಕೆಎಸ್ಆರ್ ಬೆಂಗಳೂರು
ವಿವೇಕ ಬಿರಾದಾರ
Updated on:
Oct 15, 2024 | 9:50 AM
ಬೆಂಗಳೂರು, ಅಕ್ಟೋಬರ್ 15: ಬೆಂಗಳೂರು (Bengaluru) ನಗರದಿಂದ ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ತಾಲ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಯಲ್ಲಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ.