ಪ್ರಯಾಣಿಕರ ಗಮನಕ್ಕೆ: ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು

Train Cancellation: ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಾಗೂ ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಓಡಲಿಸಲಾಗುತ್ತದೆ. ಯಾವ್ಯಾವ ರೈಲು ರದ್ದು, ಸಮಯ ಬದಲಾವಣೆ ಮಾಹಿತಿ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು
ಕೆಎಸ್​ಆರ್ ಬೆಂಗಳೂರು
Follow us
ವಿವೇಕ ಬಿರಾದಾರ
|

Updated on:Jul 17, 2024 | 8:11 AM

ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ (Train) ಸಂಚಾರ ರದ್ದು, ಸಮಯ ಮರುನಿಗದಿ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪತ್ರಿಕಾ ಪ್ರಕಟಣ ಹೊರಡಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

ರೈಲುಗಳ ಸಂಚಾರ ರದ್ದು:

ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು- ಕೆಎಸ್‌ಆರ್ ಬೆಂಗಳೂರು (06576), ಕೆಎಸ್‌ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳನ್ನು ಜುಲೈ 18 ಮತ್ತು 25 ರಂದು ರದ್ದು ಪಡಿಸಲಾಗಿದೆ.

ಭಾಗಶಃ ರದ್ದು

ಜುಲೈ 18 ಮತ್ತು 25 ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು, ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ- ಕೆಎಸ್‌ಆರ್ ಬೆಂಗಳೂರು (20652) ರೈಲು, ಕೆಎಸ್‌ಆರ್ ಬೆಂಗಳೂರು-ಧಾರವಾಡ-ಕೆಎಸ್‌ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಮಾರ್ಗ ಬದಲಾವಣೆ:

ಜುಲೈ 17 ಮತ್ತು 24 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜುಲೈ18 ಮತ್ತು 25 ರಂದು ಹೊರಡುವ ಮೈಸೂರು-ವಾರಣಾಸಿ (22687) & ಯಶವಂತಪುರ-ಜೈಪುರ (82653) ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: ಭಾರೀ ಮಳೆ ಕೊಂಕಣ ರೈಲ್ವೆ ಸೇವೆ ಸ್ಥಗಿತ; ಮಂಗಳೂರು ಎಕ್ಸ್‌ಪ್ರೆಸ್, ಮತ್ಸ್ಯ ಗಂಧ ರೈಲು ಸಂಚಾರ ಬಂದ್

ಮೈಸೂರು-ಬೆಳಗಾವಿ (17326) ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಹಿಸರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. ಮೈಸೂರು-ಉದಯಪುರ ಸಿಟಿ (19668) ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮೂಲಕ ಸಂಚರಿಸಲಿದೆ.

ರೈಲುಗಳ ನಿಯಂತ್ರಣ:

ಜುಲೈ 16 ಮತ್ತು 23 ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ಬಿಕಾನೇರ್ -ಯಶವಂತಪುರ (16588) ರೈಲನ್ನು ಮಾರ್ಗದಲ್ಲಿ 150 ನಿಮಿಷ, ಜುಲೈ 18 ಮತ್ತು 25 ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ (12629) ರೈಲು 50 ನಿಮಿಷ, ಕೆಎಸ್​ಆರ್​​ ಬೆಂಗಳೂರು-ತಾಳಗುಪ್ಪ (20651) ರೈಲು 10 ನಿಮಿಷ, ಬೆಳಗಾವಿ- ಮೈಸೂರು (17325) ರೈಲು 55 ನಿಮಿಷ, ಚಾಮರಾಜನಗರ-ತುಮಕೂರು (07345) ರೈಲನ್ನು 120 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಸಮಯ ಮರುನಿಗದಿ:

ಜುಲೈ 18 ಮತ್ತು 25 ರಂದು ಯಶವಂತಪುರ-ವಾಸ್ಕೋಡಗಾಮಾ (17309) ರೈಲು ಯಶವಂತಪುರದಿಂದ 60 ನಿಮಿಷ, ಜುಲೈ 24 ರಂದು ತುಮಕೂರು-ಶಿವಮೊಗ್ಗ ಟೌನ್ (06513) ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ.

ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು

ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಾಗುತ್ತಿದೆ.

ಜುಲೈ 19 ರಂದು ರೈಲು ಸಂಖ್ಯೆ 06533 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರುನಿಂದ ರಾತ್ರಿ 8 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7:45 ಗಂಟೆಗೆ ಕಲಬುರಗಿ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು ಜುಲೈ 20 ರಂದು ಬೆಳಿಗ್ಗೆ 9:30 ಗಂಟೆಗೆ ಕಲಬುರಗಿ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 8:30 ಕ್ಕೆ ಎಸ್‌ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅದೋನಿ, ಮಂತ್ರಾಲಯ ರ ರೋಡ್, ರಾಯಚೂರು, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.

ಈ ರೈಲು ಎಸಿ ಟು ಟೈಯರ್-1, ಎಸಿ ತ್ರೀ ಟೈಯರ್-1, ಸ್ವೀಪರ್ ಕ್ಲಾಸ್-10, ಜನರಲ್ ಸೆಕೆಂಡ್ ಕ್ಲಾಸ್-4 ಮತ್ತು ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್/ದಿವ್ಯಾಂಗ್ ಸ್ನೇಹಿ ಬೋಗಿ-2 ಸೇರಿದಂತೆ ಒಟ್ಟು 18 ಬೋಗಿಗಳು ಒಳಗೊಂಡಿರುತ್ತದೆ.

ದಟ್ಟಣೆ ತಪ್ಪಿಸಲು ಮತ್ತು ಆರಾಮದಾಯಕ ಪ್ರಯಾಣವನ್ನು ಬೆಳೆಸಲು ಪ್ರಯಾಣಿಕರು ಈ ವಿಶೇಷ ರೈಲುಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ನೈಋತ್ಯ ರೈಲ್ವೆ ವಲಯ ಪತ್ರಿಕಾ ಪ್ರಕಟಣ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Wed, 17 July 24

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್