Kannada News Karnataka Train Partial cancellation between Belagavi, Miraj, Castle Rock, Londa
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮಿರಜ್ ರೈಲು ಸಂಚಾರ ಭಾಗಶಃ ರದ್ದು
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆ ವಲಯವು ಹಲವು ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಿದೆ. ಕ್ಯಾಸಲ್ ರಾಕ್-ಲೋಂಡಾ ರೈಲ್ವೆ ವಿದ್ಯುದೀಕರಣ ಕಾಮಗಾರಿಗಳಿಂದಾಗಿ ಮಿರಜ್-ಕ್ಯಾಸಲ್ ರಾಕ್ ಮತ್ತು ಬೆಳಗಾವಿ-ಮಿರಜ್ ರೈಲುಗಳು ಭಾಗಶಃ ರದ್ದಾಗಿವೆ. ತಿರುಪತಿ-ಹುಬ್ಬಳ್ಳಿ ರೈಲು ಸೇವೆಗಳನ್ನೂ ಕೂಡ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಬೆಳಗಾವಿ ರೈಲು ನಿಲ್ದದ
ವಿವೇಕ ಬಿರಾದಾರ
Updated on:
Feb 26, 2025 | 8:22 AM
ಹುಬ್ಬಳ್ಳಿ, ಫೆಬ್ರವರಿ 26: ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು (Train) ಸೇವೆಗಳ ರದ್ದತಿಯನ್ನು ಮತ್ತು ಭಾಗಶಃ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ (South Western Railway zone) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ
ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯ ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 17333: ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
ರೈಲು ಸಂಖ್ಯೆ 17334: ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ಹೊರಡಲಿದೆ.
ಮೊದಲು, ಈ ರೈಲುಗಳನ್ನು ಫೆಬ್ರವರಿ 28 ರವರೆಗೆ ಭಾಗಶಃ ರದ್ದತಿಗಾಗಿ ಸೂಚಿಸಲಾಗಿತ್ತು, ಅದನ್ನು ಈಗ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
11 ದಿನಗಳ ಕಾಲ ಬೆಳಗಾವಿ-ಮಿರಜ್ ಕಾಯ್ದಿರಿಸದ ವಿಶೇಷ ರೈಲು ಭಾಗಶಃ ರದ್ದು
ಕುಡಚಿ-ಉಗಾರ ಖುರ್ದ್ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳನ್ನು 11 ದಿನಗಳ ಕಾಲ ಕುಡಚಿ-ಮಿರಜ್ ನಿಲ್ದಾಣಗಳ ನಡುವೆ ಭಾಗಶಃ ರದ್ದು ಗೊಳಿಸಲಾಗಿದೆ.
ರೈಲು ಸಂಖ್ಯೆ 07303: ಬೆಳಗಾವಿ-ಮಿರಜ್ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ, ಕುಡಚಿ-ಮಿರಜ್ ನಡುವೆ ಭಾಗಶಃ ರದ್ದಾಗಿರುತ್ತದೆ. ಮತ್ತು ಈ ರೈಲು ಕುಡಚಿಯಲ್ಲಿ ಕೊನೆಗೊಳ್ಳಲಿದೆ.
ರೈಲು ಸಂಖ್ಯೆ 07304: ಮಿರಜ್-ಬೆಳಗಾವಿ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ ಮಿರಜ್-ಕುಡಚಿ ನಡುವೆ ಭಾಗಶಃ ರದ್ದಾಗಿರುತ್ತದೆ. ಮತ್ತು ಈ ರೈಲು ಮಿರಜ್ ಬದಲಿಗೆ ಕುಡಚಿಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
ರೈಲು ಸಂಖ್ಯೆ 57405:ತಿರುಪತಿ ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7 ರವರೆಗೆ ಮತ್ತೆ ತಾತ್ಕಾಲಿಕವಾಗಿ ರದ್ದುಗೊಳ್ಳಲಿದೆ. ಈ ರೈಲನ್ನು ಮೊದಲು ಫೆಬ್ರವರಿ 28, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
ರೈಲು ಸಂಖ್ಯೆ 57406: ಕದಿರಿದೆವರವಲ್ಲಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8 ರವರೆಗೆ ರದ್ದುಗೊಳ್ಳಲಿದೆ. ಈ ರೈಲು ಮೊದಲು ಮಾರ್ಚ್ 1 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
ರೈಲು ಸಂಖ್ಯೆ 57401: ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ, ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7 ರವರೆಗೆ ರದ್ದಾಗಿರುತ್ತದೆ. ಈ ರೈಲು ಮೊದಲು ಫೆಬ್ರವರಿ 28 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
ರೈಲು ಸಂಖ್ಯೆ 57402: ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8 ರವರೆಗೆ ರದ್ದಾಗಿರುತ್ತದೆ. ಈ ರೈಲು ಮೊದಲು ಮಾರ್ಚ್ 1 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
Published On - 8:05 am, Wed, 26 February 25
Vivek Biradar
ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.