ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ: ಸಿಎಂ ಸಿದ್ದರಾಮಯ್ಯರಿಂದ ಕಾರ್ಯಕ್ರಮ ಉದ್ಘಾಟನೆ

ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ: ಸಿಎಂ ಸಿದ್ದರಾಮಯ್ಯರಿಂದ ಕಾರ್ಯಕ್ರಮ ಉದ್ಘಾಟನೆ
ವಿಧಾನಸಭೆ
Follow us
ವಿವೇಕ ಬಿರಾದಾರ
|

Updated on:Jun 26, 2023 | 9:06 AM

ಬೆಂಗಳೂರು: ಹೊಸದಾಗಿ ವಿಧಾನಸಭೆ (Vidhan sabha) ಪ್ರವೇಶಿಸುವ ಶಾಸಕರಿಗೆ (MLA) ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್​, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ. ಹಾಗೇ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮದ್ ಕುಂ ಸೇರಿದಂತೆ ವಿವಿಧ ಧಾರ್ಮಿಕ ಗುರುಗಳಿಂದ ಸ್ಪೂರ್ತಿದಾಯಕ ಭಾಷಣ.

ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ನಿನ್ನೆ (ಜೂ. 25) ರ ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಂಡಿದ್ದಾರೆ. ಇಂದಿನಿಂದ ಜೂ. 26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು (ಕಾರ್ಯಕ್ರಮಗಳು) ನಡೆಯಲಿವೆ. ಬೆಳಗ್ಗೆ 10 ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ವಿಧಾನಸಭೆ ಕಲಾಪ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕ ಫಸ್ಟ್: ಬಜೆಟ್‌ ಮೇಲಿನ ಚರ್ಚೆಯಲ್ಲಿ ನಂ.2

ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ಆರೋಗ್ಯ, ದೈಹಿಕ, ಮಾನಸಿಕ ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 am, Mon, 26 June 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ