Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬೆಂಗಳೂರು ನಡುವೆ ಮೆಟ್ರೋ ಮಾದರಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ರೈಲು!

ಪ್ರಸ್ತಾವಿತ ಮೆಟ್ರೋ ಮಾದರಿಯ ರೈಲು ಸಂಚಾರ ವ್ಯವಸ್ಥೆಗೆ ಈ ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ಟ್ರ್ಯಾಕ್‌ಗಳನ್ನು ನಾಲ್ಕು ಪಟ್ಟು ಹೆಚ್ಚಿಸಬೇಕಾಗಿದೆ. ಇದೊಂದು ದೊಡ್ಡ ಯೋಜನೆಯ ಭಾಗವಾಗಿದೆ. ಬಂಗಾರಪೇಟೆ-ಜೋಲಾರಪೇಟೆ, ಬೆಂಗಳೂರು-ತುಮಕೂರು, ಬೆಂಗಳೂರು-ಮೈಸೂರು ವಿಭಾಗಗಳಲ್ಲಿ ರೈಲು ಹಳಿಯ ಚತುಷ್ಪಥ ಕಾಮಗಾರಿಗೆ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಮಂಡಳಿ ಹಸಿರು ನಿಶಾನೆ ತೋರಿದೆ.

ಮೈಸೂರು ಬೆಂಗಳೂರು ನಡುವೆ ಮೆಟ್ರೋ ಮಾದರಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ರೈಲು!
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Dec 14, 2023 | 8:21 AM

ಬೆಂಗಳೂರು, ಡಿಸೆಂಬರ್ 14: ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು (Train) ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು (Railway Board) ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜತೆಗೆ, ಇದರಿಂದಾಗಿ ಉಭಯ ನಗರಗಳ ನಡುವಣ ಪ್ರಯಾಣಿಕರಿಗೆ ತ್ವರಿತ, ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ.

ಪ್ರಸ್ತಾವಿತ ಮೆಟ್ರೋ ಮಾದರಿಯ ರೈಲು ಸಂಚಾರ ವ್ಯವಸ್ಥೆಗೆ ಈ ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ಟ್ರ್ಯಾಕ್‌ಗಳನ್ನು ನಾಲ್ಕು ಪಟ್ಟು ಹೆಚ್ಚಿಸಬೇಕಾಗಿದೆ. ಇದೊಂದು ದೊಡ್ಡ ಯೋಜನೆಯ ಭಾಗವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ. ಬಂಗಾರಪೇಟೆ-ಜೋಲಾರಪೇಟೆ, ಬೆಂಗಳೂರು-ತುಮಕೂರು, ಬೆಂಗಳೂರು-ಮೈಸೂರು ವಿಭಾಗಗಳಲ್ಲಿ ರೈಲು ಹಳಿಯ ಚತುಷ್ಪಥ ಕಾಮಗಾರಿಗೆ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಮಂಡಳಿ ಹಸಿರು ನಿಶಾನೆ ತೋರಿದೆ. ಹೆಚ್ಚುವರಿಯಾಗಿ, ಬೆಂಗಳೂರಿನ ಹೊರವರ್ತುಲ ರೈಲುಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೂ ಅನುಮೋದನೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಯೋಜನೆ ಪೂರ್ಣಗೊಂಡ ನಂತರ, ಎರಡು ಸೆಟ್ ರೈಲುಗಳು (ಮೈಸೂರು-ಬೆಂಗಳೂರು ಮತ್ತು ಮೈಸೂರು ಇತರ ಸ್ಥಳಗಳಿಗೆ ಪ್ರತ್ಯೇಕವಾಗಿ) ಮೈಸೂರು ಮತ್ತು ಬೆಂಗಳೂರು ನಡುವೆ ಕಾರ್ಯನಿರ್ವಹಿಸಲಿವೆ.

ಈ ಯೋಜನೆಗಾಗಿ ಅಸ್ತಿತ್ವದಲ್ಲಿರುವ ಹಳಿಗಳ ಜೊತೆಗೆ ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತದೆ. ಏಕಕಾಲದಲ್ಲಿ ವಿದ್ಯುದ್ದೀಕರಣ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ರೈಲ್ವೆ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ವ್ಯವಸ್ಥೆಗಳಿಗಿಂತ ಭಿನ್ನವಾಗಿ, ಎಲ್ಲಾ ಭಾರತೀಯ ನಗರಗಳಲ್ಲಿನ ಉಪನಗರ ವ್ಯವಸ್ಥೆಗಳು ಭಾರತೀಯ ರೈಲ್ವೇ ಜಾಲದೊಂದಿಗೇ ಸಂಯೋಜಿಸಲ್ಪಟ್ಟಿವೆ. ಇದು ಅತ್ಯುತ್ತಮ ಮೂಲಸೌಕರ್ಯ ಬಳಕೆಯನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ: ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯಲ್ಲೇ ಹೆಚ್ಚು

ಭಾರತೀಯ ರೈಲ್ವೆ ನಡುವಿನ ಸಹಯೋಗ, ನೈಋತ್ಯ ರೈಲ್ವೆಯ ಪ್ರಸ್ತುತ ಮತ್ತು ಭವಿಷ್ಯದ ಉಪಕ್ರಮಗಳು ಬೆಂಗಳೂರು ನಗರ ಮತ್ತು ಉಪ ನಗರಗಳ ನಡುವೆ ಪ್ರಯಾಣಿಕರ ಸಂಚಾರ ಸಂಪರ್ಕವನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

ಈ ರೈಲು ಯೋಜನೆಯು ಉಭಯ ನಗರಗಳ ನಡುವಣ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್