ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಬೆಂಗಳೂರು: ಮಾರ್ಚ್​ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಡಿಸೆಂಬರ್​ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ‌ ಮಾಡಬೇಕೆಂಬ […]

ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?
ಸಂಗ್ರಹ ಚಿತ್ರ
Follow us
shruti hegde
|

Updated on:Mar 09, 2021 | 3:13 PM

ಬೆಂಗಳೂರು: ಮಾರ್ಚ್​ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಡಿಸೆಂಬರ್​ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ‌ ಮಾಡಬೇಕೆಂಬ ಬೇಡಿಕೆಯ ಜೊತೆಗೆ, ಒಟ್ಟು 10 ಬೇಡಿಕೆಗಳನ್ನು ಈಡೇರಿಸವಂತೆ ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಸರ್ಕಾರಿ ನೌಕರರನ್ನಾಗಿ ಮಾಡುವ ಬೇಡಿಕೆ ಬಿಟ್ಟು, ಉಳಿದ ಒಂಬತ್ತು ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಲಾಗಿತ್ತು. ಜೊತೆಗೆ 6ನೇ ವೇತನ ಆಯೋಗ ಜಾರಿಯ ಕುರಿತಾಗಿ ಭರವಸೆ ನೀಡಲಾಗಿತ್ತು. ಆದರೆ ನಿನ್ನೆಯ ಬಜೆಟ್​ನಲ್ಲೂ ಬೇಡಿಕೆ ಈಡೇರಿಸಿಲ್ಲ ಎಂಬ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ.

ಮಾರ್ಚ್ 16ನೇ ತಾರೀಕಿನಂದು ಮುಷ್ಕರ ಕೈಗೊಳ್ಳುವುದರ ಬಗ್ಗೆ ಇಂದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಗಾಂಧಿ ನಗರದ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಹನ್ನೆರಡು ಗಂಟೆ ಸುಮಾರಿಗೆ ಕೋಡಿಹಳ್ಳಿ ಚಂದ್ರಶೇಖರ್ ಸಭೆ ನಡೆಯಲಿದೆ. ಸಭೆಯಲ್ಲಿ ಸಾರಿಗೆ ಮುಖಂಡರು ಭಾಗಿಯಾಗಲಿದ್ದು, ಮುಂದಿನ ಹೋರಾಟ ಯಾವ ರೀತಿ ರೂಪಿಸಬೇಕು, ಮುಷ್ಕರ ನಡೆಸ ಬೇಕೋ ಬೇಡವೋ? ಈ ಎಲ್ಲಾ ಅಂಶಗಳ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಜೊತೆ ಸಭೆ ಕೈಗೊಳ್ಳಲಿದ್ದಾರೆ. ಸಭೆ ಬಳಿಕ ಮುಂದಿನ ತೀರ್ಮಾನ ಘೋಷಣೆಯಾಗಲಿದೆ.

ಇದನ್ನೂ ಓದಿ: ‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’

ಇದನ್ನೂ ಓದಿ: ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ

Published On - 11:28 am, Tue, 9 March 21

ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ