AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷಗಳ ನಂತ್ರ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. ಆ ಮೂಲಕ 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಗ್ರೂಪ್ ಎ ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿತ್ತು.

8 ವರ್ಷಗಳ ನಂತ್ರ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್
8 ವರ್ಷಗಳ ನಂತ್ರ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್
ಗಂಗಾಧರ​ ಬ. ಸಾಬೋಜಿ
|

Updated on: Jun 15, 2024 | 8:54 PM

Share

ಬೆಂಗಳೂರು, ಜೂನ್​ 15: ಆರೋಗ್ಯ ಇಲಾಖೆಯಲ್ಲಿ (Health Department) ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ದಿಟ್ಟ ಹೆಜ್ಜೆಯಿಟ್ಟಿದ್ದಾರೆ.

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆಗೆ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು.

ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ‘ನಮ್ಮ ಕ್ಲಿನಿಕ್’; ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ

ಕಾರಣ 2016 ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರೂಪ್ ಎ ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31 ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ.

ಇದನ್ನೂ ಓದಿ: ಅನಗತ್ಯವಾಗಿ ಮುಷ್ಕರಕ್ಕೆ ಮುಂದಾದ್ರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧ: 108 ಸಿಬ್ಬಂದಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ

ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ, ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ ಬಿ ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ. ಮೇಲ್ಕಣಿಸಿದ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.