KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ರಿಂದ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ಕೆಎಸ್ಆರ್ಟಿಸಿ ನೌಕರರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಲಾಕ್ಡೌನ್ ಇದ್ದ ಹಿನ್ನೆಲೆಯಲ್ಲಿ ವಿಸ್ತರಣೆ ಮಾಡಲಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ನಿಗಮ, ಈಶಾನ್ಯ ಸಾರಿಗೆ ನಿಗಮಗಳಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಕೆ ವರ್ಗಾವಣೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜುಲೈ 1ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ರಿಂದ ಆದೇಶ ಹೊರಡಿಸಲಾಗಿದೆ.
ಜುಲೈ 1 ರಿಂದ ಜುಲೈ 15 ರ ವರೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ. ದರ್ಜೆ 3 ಮೇಲ್ವಿಚಾರಕೇತರ ಹಾಗೂ ದರ್ಜೆ 4 ನೌಕರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ. ಏಪ್ರಿಲ್ 27 ರಿಂದ ಲಾಕ್ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ನೌಕರರಿಗೆ ಅರ್ಜಿ ಸಲ್ಲಿಸಲು ಕಷ್ಟವಾದ ಕಾರಣದಿಂದ ಅರ್ಜಿ ಸಲ್ಲಿಸುವ ಅವಕಾಶ ವಿಸ್ತರಣೆ ಮಾಡಲಾಗಿದೆ.
ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟ ಮತ್ತೊಂದೆಡೆ, ಶಿಕ್ಷಕರ ವರ್ಗಾವಣೆಗೆಯ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ವರ್ಗಾವಣೆಗೆ ಅದೇಶ ನೀಡಲಾಗಿದೆ.
ಇದನ್ನೂ ಓದಿ: ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ
ಸಾರಿಗೆ ನೌಕರರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ; ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ
Published On - 6:58 pm, Wed, 30 June 21