AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ

ಕರ್ನಾಟಕ ಸಾರಿಗೆ ನೌಕರರ ಮುಖಂಡರಾಗಿದ್ದ ಅನಂತ ಸುಬ್ಬರಾವ್ ಬೆಂಗಳೂರಿನಲ್ಲಿ ಇಂದು (ಜನವರಿ 28) ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಿಜಯನಗರದ ಗ್ಲೋಬಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ, ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ. 85 ವರ್ಷದ ಅನಂತ ಸುಬ್ಬರಾವ್ ಅವರು 5 ದಶಕಗಳಿಂದ ಸಾರಿಗೆ ನೌಕರರ ಪರ ಹೋರಾಟ ನಡೆಸುತ್ತಿದ್ದರು. ಸಾರಿಗೆ ನೌಕರರಿಗೆ ಅನ್ಯಾಯ, ಅವರ ಬೇಡಿಕೆ ಈಡೇರಿಕೆ ರಸ್ತೆಗಳಿದು ಪ್ರತಿಭಟನೆ ಮಾಡಿ ಸರ್ಕಾರಗಳನ್ನ ಗಮನಸೆಳೆಯುತ್ತಿದ್ದರು. ಈಗ ಅವರು ನೆನಪು ಮಾತ್ರ. ಇನ್ನು ನಾಳಿನ ಸಾರಿಗೆ ನೌಕರರ ಬೆಂಗಳೂರು ಚಲೋ ನಡೆಯುತ್ತಾ? ಬಸ್ ಓಡಾಟ ಇರುತ್ತಾ ಎನ್ನುವ ವಿವರ ಈ ಕೆಳಗಿನಂತಿದೆ.

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ
ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್
ರಮೇಶ್ ಬಿ. ಜವಳಗೇರಾ
|

Updated on:Jan 28, 2026 | 8:34 PM

Share

ಬೆಂಗಳೂರು, (ಜನವರಿ 28): ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) (Transport employees leader ananth subbarao)ನಿಧನರಾಗಿದ್ದಾರೆ. ಇಂದು (ಜನವರಿ 28) ಸಂಜೆ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 85 ವರ್ಷದ ಅನಂತ್ ಸುಬ್ಬರಾವ್ ಅವರು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ ಪರ ಹೋರಾಟ ಮಾಡಿಕೊಂಡು ಬಂದಿದ್ದರು. ಇದರಂತೆ ನಾಳೆ(ಜನವರಿ 29) ಸಾರಿಗೆ ನೌಕರರಿಗೆ ಬೆಂಗಳೂರು ಚಲೋಗೆ ಕರೆ ನೀಡಿದ್ದರು. ಆದ್ರೆ, ಇದೀಗ ಅವರ ನಿಧನದಿಂದಾಗಿ ಬೆಂಗಳೂರು ಚಲೋ(Bengaluru Chalo Strike)  ಮುಂದೂಡಿಕೆಯಾಗಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ.

ಅನಂತ್ ಸುಬ್ಬರಾವ್ ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನವರು. ಅನಂತ ಸುಬ್ಬರಾವ್ ನೇತೃತ್ವದಲ್ಲೇ ನಾಳೆ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಈಗ ಅನಂತ್ ಸುಬ್ಬರಾವ್ ನಿಧನರಾದ ಹಿನ್ನಲೆಯಲ್ಲಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC

ಬೆಂಗಳೂರು ಚಲೋ ಮುಷ್ಕರ ಮುಂದೂಡಿಕೆ

ಅನಂತ್ ಸುಬ್ಬರಾವ್ ಆಪ್ತ ಡಿ.ಎ.ವಿಜಯ ಭಾಸ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಇಂದು ಸಂಜೆ 5.30ರ ಸುಮಾರಿನಲ್ಲಿ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಅನಂತ್ ಸುಬ್ಬರಾವ್ ಸಾವನ್ನಪ್ಪಿದ್ದಾರೆ. 5 ದಶಕಗಳಿಂದ ಸಾರಿಗೆ ನೌಕರರ ಪರ ಹೋರಾಟ ನಡೆಸುತ್ತಿದ್ದರು. ಅನಂತ್ ಸುಬ್ಬರಾವ್ ನಿಧನ ಹಿನ್ನೆಲೆಯಲ್ಲಿ ನಾಳೆ ಕರೆ ನೀಡಿದ್ದ ಬೆಂಗಳೂರು ಚಲೋ ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.

ಎಂದಿನಂತೆ ಬಸ್ ಓಡಾಟ

ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಗಮದ ಸಾರಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು.  ಇದರಿಂದ ನಾಳೆ (ಜನವರಿ 28) ಬಸ್ ಸಂಚಾರ ಇರುತ್ತಾ ಇಲ್ಲಾ ಎಂದು ಪ್ರಯಾಣಿಕರಲ್ಲಿ ಗೊಂದಲ ಮೂಡಿಸಿತ್ತು.  ಆದ್ರೆ, ಸಾರಿಗೆ ನೌಕರರ ಸಂಘದ ಮುಖಂಡ ಸಾವನ್ನಪ್ಪಿರುವುದರಿಂದ ಬೆಂಗಳೂರು ಚಲೋ ಮುಷ್ಕರವನ್ನು ಮುಂದೂಡಿದ್ದಾರೆ. ಹೀಗಾಗಿ ನಾಳೆ (ಜನವರಿ 29) ಎಂದಿನಂತೆ ಬಸ್ ಸಂಚಾರ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 pm, Wed, 28 January 26

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!