ಪ್ರಯಾಣಿಕರ ತುರ್ತು ಗಮನಕ್ಕೆ! ಫೆಬ್ರವರಿ 20 ರಂದು ಬಸ್ ಬಂದ್

ಬೆಂಗಳೂರು: ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿ ಫೆಬ್ರವರಿ 20ರಂದು ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಲಾಗಿದೆ. ಇದೇ ತಿಂಗಳ 20ರಂದು ಕುಟುಂಬ ಸಮೇತರಾಗಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸೇವೆಗೆ ರಜೆ ಹಾಕಿ ಹೋರಾಟದಲ್ಲಿ ಭಾಗಿಯಾಗಲು ಚಿಂತನೆ ನಡೆಸಲಾಗಿದೆ ಹೀಗಾಗಿ ಫೆಬ್ರವರಿ 20 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗುವಂತಹ ಸಾಧ್ಯತೆ ಹೆಚ್ಚಾಗಿದೆ. ಕಳೆದ ಹಲವಾರು ವರ್ಷಗಳಿಂದ ಎಷ್ಟೇ ಹೋರಾಟ ಮಾಡಿದ್ರೂ ಫಲ ಸಿಗದ ಹಿನ್ನೆಲೆ ಈ ಬಾರಿ ಸಾರಿಗೆ ನೌಕರರ […]

ಪ್ರಯಾಣಿಕರ ತುರ್ತು ಗಮನಕ್ಕೆ! ಫೆಬ್ರವರಿ 20 ರಂದು ಬಸ್ ಬಂದ್
ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆಗೆ ಒಪ್ಪಿಗೆ ನೀಡಿದ ರಾಜ್ಯ ಸರ್ಕಾರ
Follow us
ಸಾಧು ಶ್ರೀನಾಥ್​
|

Updated on:Feb 18, 2020 | 10:51 AM

ಬೆಂಗಳೂರು: ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿ ಫೆಬ್ರವರಿ 20ರಂದು ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಲಾಗಿದೆ. ಇದೇ ತಿಂಗಳ 20ರಂದು ಕುಟುಂಬ ಸಮೇತರಾಗಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸೇವೆಗೆ ರಜೆ ಹಾಕಿ ಹೋರಾಟದಲ್ಲಿ ಭಾಗಿಯಾಗಲು ಚಿಂತನೆ ನಡೆಸಲಾಗಿದೆ ಹೀಗಾಗಿ ಫೆಬ್ರವರಿ 20 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗುವಂತಹ ಸಾಧ್ಯತೆ ಹೆಚ್ಚಾಗಿದೆ.

ಕಳೆದ ಹಲವಾರು ವರ್ಷಗಳಿಂದ ಎಷ್ಟೇ ಹೋರಾಟ ಮಾಡಿದ್ರೂ ಫಲ ಸಿಗದ ಹಿನ್ನೆಲೆ ಈ ಬಾರಿ ಸಾರಿಗೆ ನೌಕರರ ಆಕ್ರೋಶ ತೀವ್ರ ಸ್ವರೂಪ ಪಡೆದಿದೆಯಂತೆ. ನೌಕರರು ತಮ್ಮ ಕುಟುಂಬ ಸಮೇತ ಉಪವಾಸ ಧರಣಿ ಹಾದಿ ತುಳಿಯಲು ನಿರ್ಧರಿಸಿದ್ದಾರೆ. ನಾಡೋಜಾ ಪಾಟೀಲ್ ಪುಟ್ಟಪ್ಪ ನೇತೃತ್ವದಲ್ಲಿ ಉಪವಾಸ ಧರಣಿ ನಡೆಯಲಿದೆ. ಆದರೆ ಪಾಟೀಲ್ ಪುಟ್ಟಪ್ಪ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಅವ್ರು ಧರಣಿಯಲ್ಲಿ ಭಾಗಿಯಾಗುತ್ತಿಲ್ಲ.

ಈಗಾಗಲೇ ಉಪವಾಸ ಧರಣಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕರೆ ನೀಡಲಾಗಿದೆ. ಹೀಗಾಗಿ ಫೆಬ್ರವರಿ 20ರಂದು ಸಾರ್ವಜನಿಕರಿಗೆ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್ ಸಮಸ್ಯೆ ಉಂಟಾಗಲಿದೆ.

Published On - 9:55 am, Tue, 18 February 20

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ