AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇವಾ ಚಟುವಟಿಕೆಗಳಿಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ

ರಾಜ್ಯದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳಿಗೆ ಮತ್ತು ಕೊವಿಡ್ ನಿಯಂತ್ರಣ ಕೆಲಸ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನಾಲ್ಕೂ ಸಾರಿಗೆ ನಿಗಮಗಳಿಂದ ಅಗತ್ಯಕ್ಕನುಗುಣವಾಗಿ ಬಸ್ಸುಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಆರೋಗ್ಯ ಮತ್ತು ತುರ್ತು ಸೇವೆಗಳಿಗಾಗಿ ಪ್ರತಿನಿತ್ಯ 156 ಬಿಎಂಟಿಸಿ ಬಸ್ಸುಗಳನ್ನು ಒದಗಿಸಲಾಗಿದೆ.

ಆರೋಗ್ಯ ಸೇವಾ ಚಟುವಟಿಕೆಗಳಿಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
sandhya thejappa
|

Updated on: May 01, 2021 | 12:01 PM

Share

ರಾಯಚೂರು: ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ವಿಧಿಸಿದ್ದರು ಸಹ ಕೊವಿಡ್​ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೊವಿಡ್ ವಾರಿಯರ್ಸ್​ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ತುರ್ತು ಸನ್ನಿವೇಶವನ್ನು ಎದುರಿಸುತ್ತಿದೆ. ಆದ್ದರಿಂದ ಸಾರಿಗೆ ನಿಗಮಗಳಿಂದಲೂ ಸಹ ಈ ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳಿಗೆ ಮತ್ತು ಕೊವಿಡ್ ನಿಯಂತ್ರಣ ಕೆಲಸ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನಾಲ್ಕೂ ಸಾರಿಗೆ ನಿಗಮಗಳಿಂದ ಅಗತ್ಯಕ್ಕನುಗುಣವಾಗಿ ಬಸ್ಸುಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಆರೋಗ್ಯ ಮತ್ತು ತುರ್ತು ಸೇವೆಗಳಿಗಾಗಿ ಪ್ರತಿನಿತ್ಯ 156 ಬಿಎಂಟಿಸಿ ಬಸ್ಸುಗಳನ್ನು ಒದಗಿಸಲಾಗಿದೆ. ಇದರಿಂದಾಗಿ ವಿವಿಧ ಆಸ್ಪತ್ರೆಗಳ ನಡುವೆ ಸಂಪರ್ಕಕ್ಕೆ ಅನುಕೂಲವಾಗಿದೆ. ಅಲ್ಲದೇ ವೈದ್ಯರಿಗೆ, ದಾದಿಯರಿಗೆ, ಪೊಲೀಸರಿಗೆ, ಅಗ್ನಿಶಾಮಕ ದಳದವರಿಗೆ, ನೀರು-ವಿದ್ಯುತ್ ಪೂರೈಕೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಂಚಾರ ಸೌಲಭ್ಯಕ್ಕೆ ಸಹಾಯಕವಾಗಿದೆ. ಕೆಎಸ್ಆರ್​ಟಿಸಿಯಿಂದ ಇದೇ ರೀತಿ ಸುಮಾರು 50 ಬಸ್ಸುಗಳು ಸಂಚರಿಸುತ್ತಿವೆ.

ಸವದಿಯ ಮನವಿ ಸಾರಿಗೆ ನಿಗಮಗಳಿಂದಲೂ ಆಯಾ ಜಿಲ್ಲಾಡಳಿತವು ಮನವಿ ಮಾಡಿಕೊಂಡ ಪ್ರಕಾರ ತುರ್ತು ಸೇವೆಗಾಗಿ ಬಸ್ಸುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದಿಂದ ಒಂದು ವೇಳೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳಿಗೆ ಬೇಡಿಕೆ ಬಂದರೆ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಬಸ್ಸುಗಳನ್ನು ಒದಗಿಸುವುದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಾಕ್​ಡೌನ್​ ಅವಧಿಯಲ್ಲಿ ಸಾರ್ವಜನಿಕರ ಸಾರಿಗೆ ಸಂಚಾರವನ್ನು ನಿಷೇಧಿಸಿರುವುದರಿಂದ ಈ ವಿಶೇಷ ಬಸ್ಸುಗಳ ಸೌಕರ್ಯವೂ ಕೇವಲ ಆರೋಗ್ಯ ಮತ್ತು ತುರ್ತು ಸಂದರ್ಭಗಳನ್ನು ನಿಭಾಯಿಸಲು ಸೇವೆ ಸಲ್ಲಿಸುತ್ತಿರುವವರಿಗೆ ಮಾತ್ರ ಸೀಮಿತವಾಗಿದೆ. ಇತರ ಪ್ರಯಾಣಿಕರಿಗೆ ಈ ಬಸ್ ಸೌಲಭ್ಯಗಳು ಇರುವುದಿಲ್ಲ. ಸಾರ್ವಜನಿಕರು ಈ ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸೂಕ್ತ ಸಹಕಾರ ನೀಡಬೇಕೆಂದು ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಕೊರೊನಾ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಸಾರಿಗೆ ನಿಗಮಗಳ ಬಸ್ಸುಗಳನ್ನೇ ಮೊಬೈಲ್ ಕ್ಲಿನಿಕ್​ಗಳನ್ನಾಗಿ ಮತ್ತು ಕೊವಿಡ್ ಟೆಸ್ಟಿಂಗ್ ವಾಹನಗಳನ್ನಾಗಿ ಮಾರ್ಪಡಿಸಲಾಗಿತ್ತು. ಸುಮಾರು 20 ಮೊಬೈಲ್ ಬಸ್ಸುಗಳೂ ಸಹ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದೊಂದಿಗೆ ಸೇವೆ ಸಲ್ಲಿಸುತ್ತಿವೆ ಎಂದು ಸವದಿಯವರು ಸ್ಪಷ್ಟಪಡಿಸಿ, ಕೊವಿಡ್ ವಾರಿಯರ್ಸ್​ಗಳಂತೆಯೇ ಸಾರಿಗೆ ನಿಗಮಗಳ ಸಿಬ್ಬಂದಿಗಳು ಸಹ ಇಂದಿನ ಸಂಕಷ್ಟದ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವುದಕ್ಕೆ ಸವದಿ ತಮ್ಮ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ

ಲಂಡನ್ ಉಚ್ಛ ನ್ಯಾಯಾಲಯಕ್ಕೆ ನೀರವ್ ಮೋದಿ; ಭಾರತ ಹಸ್ತಾಂತರಕ್ಕೆ ತಡೆ ಕೋರಿ ಅರ್ಜಿ

ವಿಶ್ವ ದಾಖಲೆ: ಭಾರತದಲ್ಲಿ ದಿನಕ್ಕೆ 4 ಲಕ್ಷದ ಗಡಿ ದಾಟಿದ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ, ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು

(Transport for health service activities will be provided says Savadi said at raichur)

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು